Saturday, April 19, 2025
Google search engine

HomeUncategorizedಗುಂಡ್ಲುಪೇಟೆ: ವಿವಿಧ ಶಾಲೆ-ಕೋರ್ಟ್‍ನಲ್ಲಿ ಯೋಗ ದಿನ ಆಚರಣೆ

ಗುಂಡ್ಲುಪೇಟೆ: ವಿವಿಧ ಶಾಲೆ-ಕೋರ್ಟ್‍ನಲ್ಲಿ ಯೋಗ ದಿನ ಆಚರಣೆ

ಗುಂಡ್ಲುಪೇಟೆ: ತಾಲೂಕಿನ ಹೊಂಗಹಳ್ಳಿ, ಹಂಗಳ, ತೆರಕಣಾಂಬಿ, ಬೇಗೂರು, ಪಟ್ಟಣದ ಊಟಿ ರಸ್ತೆ ಶಾಲೆ, ಕೆ.ಎಸ್.ನಾಗರತ್ನಮ್ಮ, ದೊಡ್ಡಹುಂಡಿ ಭೋಗಪ್ಪ, ಸೆಂಟ್ ಜಾನ್ಸ್ ಸೇರಿದಂತೆ ವಿವಿಧ ಶಾಲೆಗಳು ಹಾಗೂ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ 9ನೇ ಅಂತರಾಷ್ಟ್ರೀಯ ಯೋಗ ದಿನವನ್ನು ವಿವಿಧ ಭಂಗಿಯ ಯೋಗ ಪ್ರದರ್ಶಿಸುವ ಮೂಲಕ ಆಚರಣೆ ಮಾಡಲಾಯಿತು.

ನ್ಯಾಯಾಧೀಶರಿಂದ ಯೋಗ ದಿನಾಚರಣೆಗೆ ಚಾಲನೆ: ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ನಡೆದ 9ನೇ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಹಿರಿಯ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಬಸವರಾಜ ತಳವಾರ್ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಇಂದಿನ ಒತ್ತಡದ ಜೀವನದಲ್ಲಿ ಮನುಷ್ಯನ ಆರೋಗ್ಯ ಕಾಪಾಡಿಕೊಳ್ಳಲು ಯೋಗಾಭ್ಯಾಸ ಅಗತ್ಯವಾಗಿದೆ. ಯಾವುದೇ ವಯಸ್ಸಿನ ಮಿತಿಯಿಲ್ಲದೆ ಯೋಗವನ್ನು ಅಭ್ಯಾಸ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ದೇಹ ಮತ್ತು ಮನಸ್ಸು ಎರಡನ್ನೂ ಸ್ವಸ್ಥವಾಗಿಡಲು ಯೋಗದಿಂದ ಸಾಧ್ಯವಿದೆ. ಯೋಗವೆಂದರೆ ಔಷಧ ರಹಿತ ಚಿಕಿತ್ಸಾ ಪದ್ಧತಿಯ ದೇಸಿ ಕ್ರಮ. ಮಿತ ಆಹಾರ ಸೇವನೆ, ಉಪವಾಸ ವ್ಯಾಯಾಮದಂತಹ ಚಿಕಿತ್ಸಾ ಕ್ರಮಗಳ ಮೂಲಕ ಮನುಷ್ಯನ ದೇಹವನ್ನು ನಿಯಂತ್ರಣ ತರಬಹುದಾಗಿದೆ. ಪ್ರತಿದಿನ ಯೋಗ ಮಾಡುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಬಹುದು. ಜೊತೆಗೆ ಸರಳ ಯೋಗಗಳು ನಮ್ಮ ಮನಸ್ಸನ್ನು ಉಲ್ಲಸವಾಗಿಡುತ್ತದೆ ಎಂದರು.

ಈ ಸಂದರ್ಭದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಜಿ.ಜೆ.ಶಿವಕುಮಾರ, ಅಪರ ಸಿವಿಲ್ ನ್ಯಾಯಾಧೀಶರಾದ ಎ.ಎಂ.ಕಾಂತಮ್ಮ, ವಕೀಲರ ಸಂಘದ ಅಧ್ಯಕ್ಷ ಟಿ.ಎಸ್.ವೆಂಕಟೇಶ್, ಕಾರ್ಯದರ್ಶಿ ಪುಟ್ಟಸ್ವಾಮಿ, ಸಿದ್ದಯ್ಯ ಸೇರಿದಂತೆ ನ್ಯಾಯಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಗುಂಡ್ಲುಪೇಟೆ ತಾಲೂಕಿನ ಕಾಡಂಚಿನ ಹೊಂಗಹಳ್ಳಿ ಪರಿಸರ ಮಿತ್ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ ಆಚರಿಸಲಾಯಿತು.

ಹೊಂಗಹಳ್ಳಿ ಶಾಲೆ ಯೋಗದಿನಾಚರಣೆ: ತಾಲೂಕಿನ ಕಾಡಂಚಿನ ಹೊಂಗಹಳ್ಳಿ ಪರಿಸರ ಮಿತ್ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ ಆಚರಿಸಲಾಯಿತು. ಪ್ರಾಣಾಯಾಮ, ಸೂರ್ಯ ನಮಸ್ಕಾರ ಸೇರಿದಂತೆ ಹಲವು ಯೋಗಾಸನಗಳನ್ನು ಶಾಲಾ ಮಕ್ಕಳಿಂದ ಮಾಡಿಸಲಾಯಿತು.

ಮುಖ್ಯ ಶಿಕ್ಷಕ ಮಹದೇಶ್ವರಸ್ವಾಮಿ ಮಾತನಾಡಿ, ಜಗತ್ತಿಗೆ ಯೋಗವನ್ನು ಅನಾದಿ ಕಾಲದಿಂದಲೂ ಪರಿಚಯ ಮಾಡಿ ಕೊಟ್ಟಿರುವುದು ನಮ್ಮ ಭಾರತ ದೇಶದ ಋಷಿ ಮುನಿಗಳು. ಯೋಗದಿಂದ ಸದೃಢ ದೇಹ ಮತ್ತು ಸದೃಢ ಮನಸ್ಸು ನಿರ್ಮಾಣವಾಗುತ್ತದೆ. ಒಳ್ಳೆಯ ಜೀವನಶೈಲಿ, ಸಾತ್ವಿಕ ಆಹಾರ ಸೇವನೆ ಹಾಗೂ ಉತ್ತಮ ಚಿಂತನೆ ಮಾಡುತ್ತಾ ಕಾಯಕ ಯೋಗದ ಮೂಲಕ ಸಾರ್ಥಕವಾಗಿ ಬದುಕೋಣ ಎಂದು ಸಲಹೆ ನೀಡಿದರು. ಶಿಕ್ಷಕರಾದ ಪ್ರಭಾಕರ, ವಿನೋದ, ಅತಿಥಿ ಶಿಕ್ಷಕಿಯರಾದ ಕವಿತ, ಜಯಶೀಲ ಸೇರಿದಂತೆ ಶಾಲಾ ಮಕ್ಕಳು ಹಾಜರಿದ್ದರು.

ಗುಂಡ್ಲುಪೇಟೆ ಪಟ್ಟಣದ ಹೊರ ವಲಯದಲ್ಲಿರುವ ಸೆಂಟ್ ಜಾನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 9ನೇ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.

ಸೆಂಟ್ ಜಾನ್ಸ್ ಶಾಲೆಯಲ್ಲಿ ಮಕ್ಕಳಿಂದ ಯೋಗ: ಪಟ್ಟಣದ ಹೊರ ವಲಯದಲ್ಲಿರುವ ಸೆಂಟ್ ಜಾನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 9ನೇ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.  ಈ ವೇಳೆ ಶಾಲಾ ಮುಖ್ಯ ಶಿಕ್ಷಕಿ ಸುನೀತಾ ಮೇರಿ, ಯೋಗ ದಿನಾಚರಣೆಯ ಮಹತ್ವವನ್ನು ಮಕ್ಕಳಿಗೆ ತಿಳಿಸಿದರು. ಶಿಕ್ಷಕಿ ಗೌರಮ್ಮ, ಶಿಕ್ಷಕ ಆಂಜನೇಯ, ಯೋಗದ ಪ್ರಯೋಜನಗಳನ್ನು ತಿಳಿಸಿ ಹಲವು ಸರಳ ಯೋಗಾಸನಗಳನ್ನು ಮಾಡಿ ಪ್ರದರ್ಶಿಸಿದರು. ಮಕ್ಕಳು ಈ ಯೋಗಾಸನಗಳನ್ನು ಮಾಡಿದರು. ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ಗುಂಡ್ಲುಪೇಟೆ ಪಟ್ಟಣದ ಊಟಿ ರಸ್ತೆ ಸರ್ಕಾರಿ ಕೆ.ಪಿ.ಎಸ್ ಶಾಲೆಯಲ್ಲಿ ಶಿಕ್ಷಣ ಪೌಂಡೇಶನ್, ಮೈಂಡ್ ಟ್ರೀ ಸಹಯೋಗದೊಂದಿಗೆ ಯೋಗ ದಿನವನ್ನು ಆಚರಣೆ ಮಾಡಲಾಯಿತು.

ಗುಂಡ್ಲುಪೇಟೆ ಪಟ್ಟಣದ ಊಟಿ ರಸ್ತೆ ಸರ್ಕಾರಿ ಕೆ.ಪಿ.ಎಸ್ ಶಾಲೆಯಲ್ಲಿ ಶಿಕ್ಷಣ ಪೌಂಡೇಶನ್, ಮೈಂಡ್ ಟ್ರೀ ಸಹಯೋಗದೊಂದಿಗೆ ಯೋಗ ದಿನವನ್ನು ಆಚರಣೆ ಮಾಡಲಾಯಿತು.

ಊಟಿ ರಸ್ತೆ ಶಾಲೆ ಯೋಗಾಭ್ಯಾಸ: ಪಟ್ಟಣದ ಊಟಿ ರಸ್ತೆ ಸರ್ಕಾರಿ ಕೆ.ಪಿ.ಎಸ್ ಶಾಲೆಯಲ್ಲಿ ಶಿಕ್ಷಣ ಪೌಂಡೇಶನ್, ಮೈಂಡ್ ಟ್ರೀ ಸಹಯೋಗದೊಂದಿಗೆ ಯೋಗ ದಿನವನ್ನು ಆಚರಣೆ ಮಾಡಲಾಯಿತು. ಯೋಗ ಸಂಪನ್ಮೂಲ ವ್ಯಕ್ತಿಯಾದ ಸುಂದರೇಶ್ ವಿವಿಧ ಬಗೆಯ ಯೋಗಾಸದನ ಭಂಗಿಗಳನ್ನು ಹೇಳಿಕೊಟ್ಟರು.

ಶಾಲಾ ಮುಖ್ಯ ಶಿಕ್ಷಕ ಸಿದ್ಧಾರ್ಥ್, ಸಹ ಶಿಕ್ಷಕರಾದ ಮಂಜುಳ, ಶಾರದಮ್ಮ, ರೇಖಾ, ನೀಲಾಂಬಿಕಾ, ವೃಷಬೇಂದ್ರ, ಶಿಕ್ಷಣ ಪೌಂಡೇಶನ್‍ನ ತಾಲೂಕು ವ್ಯವಸ್ಥಾಪಕ ಕಲ್ಲಿಗೌಡನಹಳ್ಳಿ ಮಹದೇವಸ್ವಾಮಿ ಸೇರಿದಂತೆ ಶಾಲಾ ಮಕ್ಕಳು ಹಾಜರಿದ್ದರು.

RELATED ARTICLES
- Advertisment -
Google search engine

Most Popular