ಮಂಡ್ಯ: ಕೆರಗೋಡು ಗ್ರಾಮದ ಹನುಮಧ್ವಜ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಹನುಮ ಧ್ವಜ ಬೆಂಬಲಿಸಿದವರ ಮೇಲೆ ಶಾಸಕರ ಬೆಂಬಲಿಗರು ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.
ಶಾಸಕ ಗಣಿಗ ರವಿಕುಮಾರ್ ಬೆಂಬಲಿಗರ ವಿರುದ್ಧ ಕೊಲೆ ಬೆದರಿಕೆ ಆರೋಪ ಕೇಳಿಬಂದಿದ್ದು, ಈ ಹಿನ್ನಲೆ ಕೆರಗೋಡು ಗ್ರಾಮದ ರಾಜೇಶ್ ಎಂಬುವವರು ಮಂಡ್ಯ ಎಸ್.ಪಿ.ಕಚೇರಿಗೆ ಎಸ್ಪಿಗೆ ದೂರು ನೀಡಿದ್ದಾರೆ.

ಮಾರ್ಚ್ 08 ರಂದು ಕೆರಗೋಡು ಗ್ರಾಮದಲ್ಲಿ ನಡೆದ ಪಂಚಲಿಂಗ ಉತ್ಸವದ ವೇಳೆ ಗಲಾಟೆ ನಡೆದಿತ್ತು. ಗಲಾಟೆ ವೇಳೆ ಶಾಸಕರ ಬೆಂಬಲಿಗರು ಕೊಲೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
ಹನುಮ ಧ್ವಜ ವಿಚಾರದಿಂದ ಹಿಂದೆ ಸರಿಯುವಂತೆ ಒತ್ತಡ ಹಾಕುತ್ತಿದ್ದಾರೆ.ಶಾಸಕ ಗಣಿಗ ರವಿಕುಮಾರ್ ಜನರಿಗೆ ಅನ್ಯಾಯ ಮಾಡ್ತಿದ್ದಾರೆ. ಗಣಿಗ ರವಿಕುಮಾರ್ ಹಿಂಬಾಲಕರು ಗಲಾಟೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ. ನಾವು ಕೊಟ್ಟ ಅರ್ಜಿಯನ್ನು ಸುಳ್ಳು ದಾಖಲೆ ಸೃಷ್ಟಿಸಿ ಕಳವು ಮಾಡಿದ ಬಗ್ಗೆ ಮಾತನಾಡುತ್ತಾರೆ. ನೀವು ನಮಗೆ ಲೆಕ್ಕ ಇಲ್ಲ, ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಾರೆ. ತಕ್ಷಣವೇ ಲೋಕೇಶ್, ರಾಜೇಶ್ ಎಂಬುವವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ದೂರಿನಲ್ಲಿ ಆಗ್ರಹಿಸಿದ್ದಾರೆ.
ಕಾನೂನು ಕ್ರಮ ಕೈಗೊಂಡು ರಕ್ಷಣೆ ನೀಡುವಂತೆ ಮನವಿ ಇದೇ ಸಂದರ್ಭದಲ್ಲಿ ಮನವಿ ಮಾಡಿದ್ದಾರೆ.