ಬೆಂಗಳೂರು: ಬಿಜೆಪಿ- ಜೆಡಿಎಸ್ ನಡುವೆ ಏನೇ ಸಣ್ಣಪುಟ್ಟ ವ್ಯತ್ಯಾಸಗಳಿದ್ದರೂ ಸಹ ಎಲ್ಲವೂ ಸುಖಾಂತ್ಯ ಆಗಲಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಸುಸೂತ್ರವಾಗಿ ಮುಂದುವರೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತಿಳಿಸಿದರು.
ಡಾಲರ್ಸ್ ಕಾಲೋನಿ ನಿವಾಸದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, ಜೆಡಿಎಸ್‌ನವರಿಗೂ ಸಮಾಧಾನ ಆಗುವ ರೀತಿಯಲ್ಲಿ ನಮ್ಮ ರಾಷ್ಟ್ರೀಯ ನಾಯಕರು ಸಮರ್ಪಕ ತೀರ್ಮಾನ ಮಾಡುವ ವಿಶ್ವಾಸ ಇದೆ. ಚರ್ಚೆಯಿಂದ ವಿಷಯ ಬಗೆಹರಿಯಲಿದೆ ಎಂದರು.
ನಮ್ಮ ರಾಷ್ಟ್ರೀಯ ನಾಯಕರ ಜೊತೆ ನಿನ್ನೆ ದೂರವಾಣಿ ಮೂಲಕ ಚರ್ಚೆ ಮಾಡಿದ್ದೇನೆ. ಬಳಿಕ ಮಾಜಿ ಪ್ರಧಾನಿ ದೇವೇಗೌಡ ಅವರ ಜೊತೆಗೂ ದೂರವಾಣಿ ಮೂಲಕ ಚರ್ಚಿಸಿದ್ದೇನೆ. ಎಚ್ ಡಿ ಕುಮಾರಸ್ವಾಮಿ ಅವರಿಗೂ ಬೆಳಿಗ್ಗೆ ಮಾಹಿತಿ ನೀಡಿದ್ದೇನೆ ಎಂದು ಹೇಳಿದರು.