ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕ ಕಂಡ ಅತ್ಯಂತ ದುರ್ಬಲ, ಅಸಹಾಯಕ ಮುಖ್ಯಮಂತ್ರಿ ಎಂದು ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ತಿಳಿಸಿದರು. ಎಕ್ಸ್ ತಾಣದಲ್ಲಿ ಈ ಬಗ್ಗೆ ಬರೆದುಕೊಂಡಿರು ಅವರು, ಬಿ ಕೆ ಹರಿಪ್ರಸಾದ್ ಅವರು ತಮ್ಮ ಮೇಲೆ ಪದೇ ಪದೇ ವಾಗ್ದಾಳಿ ನಡೆಸಿದರೂ ಅವರ ಮೇಲೆ ಯಾವುದೇ ಕ್ರಮ ಕೈಗೊಳ್ಳಲಾಗದಷ್ಟು, ಕನಿಷ್ಠ ಪಕ್ಷ ಪ್ರತ್ಯುತ್ತರ ಕೂಡ ನೀಡಲಾಗದಷ್ಟು ಅಸಹಾಯಕರ ತಾವು ಎಂದು ಸಿದ್ದರಾಮಯ್ಯರನ್ನು ಟೀಕಿಸಿದ್ದಾರೆ.
ಡಿಸಿಎಂ ಡಿ ಕೆ ಶಿವಕುಮಾರ್ ಅವರ ಬಣ ಅವಕಾಶ ಸಿಕ್ಕಾಗಲೆಲ್ಲಾ ಬಂಡಾಯದ ಬಾವುಟ ಹಾರಿಸಿ ತಮ್ಮ ಕುರ್ಚಿಯ ಮುಗಿಯುತ್ತದೆ ಎಂದು ಕಾಲೆಳೆಯುತ್ತಿದ್ದರೂ ಏನೂ ಮಾಡಲಾಗದ ಅಸಹಾಯಕ ಸ್ಥಿತಿ ಸಿದ್ದರಾಮಯ್ಯರದ್ದು ಎಂದಿದ್ದಾರೆ. ಪ್ರಧಾನಿ ಮೋದಿ ಅವರೇ ಮತ್ತೊಮ್ಮೆ ಮುಂದಿನ ಐದು ವರ್ಷ ಈ ದೇಶದ ಸ್ಟ್ರಾಂಗ್ ಪ್ರಧಾನಿ ಆಗಿ ಮುಂದುವರೆಯುತ್ತಾರೆ ಎಂದು ವಿಶ್ವಾಸದಿಂದ ಹೇಳುವ ಧೈರ್ಯ ನನಗಿದೆ. ನಿಮಗೆ ತಾಕತ್ತಿದ್ದರೆ, ನೀವು ಹೇಳಿಕೊಳ್ಳುವಂತೆ ತಾವು ಸ್ಟ್ರಾಂಗ್ ಮುಖ್ಯಮಂತ್ರಿಯೇ ಆಗಿದ್ದರೆ, ನಾನೇ ಐದು ವರ್ಷ ಮುಖ್ಯಮಂತ್ರಿ ಎಂದು ಒಮ್ಮೆ ಹೇಳಿ ನೋಡೋಣ? ಎಂದು ಆರ್ ಅಶೋಕ್ ಸವಾಲು ಹಾಕಿದ್ದಾರೆ.