Sunday, April 20, 2025
Google search engine

Homeರಾಜಕೀಯಬಿಎಸ್‌ವೈ ಸರ್ವಾಧಿಕಾರದಿಂದ ಬಿಜೆಪಿ ಮುಕ್ತವಾಗಬೇಕು: ಕೆ.ಎಸ್.ಈಶ್ವರಪ್ಪ

ಬಿಎಸ್‌ವೈ ಸರ್ವಾಧಿಕಾರದಿಂದ ಬಿಜೆಪಿ ಮುಕ್ತವಾಗಬೇಕು: ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಮುಂದಿನ ಜೂನ್‌ನಲ್ಲೇ ಪರಿಷತ್ ಸ್ಥಾನ ಖಾಲಿ ಆಗುತ್ತದೆ. ನಿಮ್ಮ ಮಗನನ್ನು ಎಂಎಲ್‌ಸಿ ಮಾಡ್ತೀವಿ. ನಿಮಗೆ ರಾಜ್ಯಪಾಲರ ಹುದ್ದೆ ಕೊಡುತ್ತೀವಿ ಎಂದು ಬಿಜೆಪಿ ಹೈಕಮಾಂಡ್ ನನಗೆ ಆಫರ್ ಕೊಟ್ಟಿದೆ. ನನಗೆ ಯಾವುದೇ ಸ್ಥಾನಮಾನ ಬೇಡ, ಬಿಎಸ್‌ವೈ ಕುಟುಂಬದ ಸರ್ವಾಧಿಕಾರದಿಂದ ಬಿಜೆಪಿ ಮುಕ್ತವಾಗಬೇಕು ಎಂಬುದಷ್ಟೇ ಮುಖ್ಯ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಬಿ.ವೈ.ರಾಘವೇಂದ್ರನನ್ನು ಸೋಲಿಸಿ, ಬಿಜೆಪಿ ಕಟ್ಟಾ ಅನುಯಾಯಿಯಾದ ನನ್ನನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದ್ದಾರೆ.
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದು ಖಚಿತ. ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಮಾತಿಲ್ಲ. ನಾನು ಗೆದ್ದ ನಂತರ ವಿಜಯೇಂದ್ರ ತಮ್ಮ ರಾಜ್ಯಾಧ್ಯಕ್ಷರ ಹುದ್ದೆಗೆ ರಾಜೀನಾಮೆ ನೀಡುವುದು ನಿಶ್ಚಿತ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಈಶ್ವರಪ್ಪ ಸ್ಪರ್ಧೆ ಬಗ್ಗೆ ಇಡೀ ರಾಜ್ಯದಲ್ಲಿ ಚರ್ಚೆಯಾಗುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ನಾನು ಗೆಲ್ಲುತ್ತೇನೆ. ಚುನಾವಣಾ ಫಲಿತಾಂಶ ಬಂದು ಬಿಜೆಪಿ ಕಾರ್ಯಕರ್ತರ ವಿಜಯವಾಗುತ್ತಿದ್ದಂತೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಮ್ಮ ಹುದ್ದೆಗೆ ರಾಜೀನಾಮೆ ಕೊಡುತ್ತಾರೆ ಎಂದು ಹೇಳಿದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ೮ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನಿರೀಕ್ಷೆಗೆ ಮೀರಿ ಬೆಂಬಲ ಸಿಗುತ್ತಿದೆ. ಸ್ವಾಮೀಜಿಗಳು ಬೆಂಬಲ ಕೊಡ್ತಿದ್ದಾರೆ, ಸಿಗಂಧೂರು ಚೌಡೇಶ್ವರಿ ದೇವಸ್ಥಾನದಲ್ಲಿ ಆಶೀರ್ವಾದ ದೊರೆತಿದೆ. ಯಾವ ಕಾರಣಕ್ಕೂ ತೊಂದರೆ ಆಗಲ್ಲ, ನೂರಕ್ಕೆ ನೂರು ನೀವು ಗೆಲ್ಲುತ್ತೀರಾ ಎಂದು ಸ್ವಾಮೀಜಿಗಳು ಹೇಳಿದರು ಎಂದು ತಿಳಿಸಿದ್ದಾರೆ. ಒಂದು ಕುಟುಂಬದ ಕೈಯಲ್ಲಿ ಪಕ್ಷ ಸಿಕ್ಕಿದೆ, ಸರ್ವಾಕಾರಿ ಧೋರಣೆ ಇದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರದಲ್ಲಿ ಗೆದ್ದು ಬಿಜೆಪಿ ಅಧಿಕಾರಕ್ಕೆ ಬರಲಿದೆ. ಬಿಜೆಪಿ ರಾಜ್ಯಾಧ್ಯಕ್ಷರನ್ನು ಬದಲಾವಣೆ ಮಾಡುವ ಪ್ರಯತ್ನ ರಾಜ್ಯದಲ್ಲಿ ನಡೆಯುತ್ತಿದೆ. ನಾನು ಸಹ ಆ ದಿಕ್ಕಿನಲ್ಲಿ ಪ್ರಯತ್ನ ಮಾಡ್ತಿದ್ದೇನೆ. ಯಾರೇ ಬಂದು ಮನವೊಲಿಸಿದರೂ ಹಿಂದೆ ಸರಿಯಲ್ಲ. ರಾಜ್ಯದಲ್ಲಿ ಈ ಬಾರಿ ಬಿಜೆಪಿ ೨೮ ಸ್ಥಾನ ಗೆಲ್ಲಬೇಕು. ನಾನು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕುಟುಂಬದ ವಿರುದ್ಧ ಸ್ಪರ್ಧೆ ಮಾಡಿ ಗೆಲ್ಲುತ್ತೇನೆ, ಗೆದ್ದ ನಂತರ ಬಿಜೆಪಿ ಸೇರುತ್ತೇನೆ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular