Friday, March 20, 2026
Google search engine

Homeಅಪರಾಧಸಾಲಬಾಧೆ : ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಸಾಲಬಾಧೆ : ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಬೆಂಗಳೂರು : ಖಾಸಗಿ ಬ್ಯಾಂಕ್ ಕಿರುಕುಳಕ್ಕೆ ಬೇಸತ್ತು ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಜೆ.ಪಿ.ನಗರದ ೩ನೇ ಹಂತದಲ್ಲಿ ನಡೆದಿದೆ. ತಾಯಿ ಸುಕನ್ಯಾ (೪೮), ಮಕ್ಕಳಾದ ನಿಖಿತ್(೨೮), ನಿಶ್ಚಿತ್(೨೬) ಮೃತ ದುರ್ದೈವಿಗಳು. ಇವರು ಮೂಲತಃ ಉಡುಪಿ ಮೂಲದ ಅಂಬಲಪಾಡಿಯವರು. ಕಳೆದ ಹಲವು ವರ್ಷಗಳಿಂದ ಬೆಂಗಳೂರಿನ ಜೆ.ಪಿ.ನಗರದಲ್ಲಿ ವಾಸವಾಗಿದ್ದರು. ಘಟನಾ ಸ್ಥಳಕ್ಕೆ ಜೆ.ಪಿ.ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯರು ಮತ್ತು ಸಂಬಂಧಿಕರಿಂದ ಮಾಹಿತಿ ಪಡೆಯುತ್ತಿದ್ದಾರೆ.

RELATED ARTICLES
- Advertisment -
Google search engine

Most Popular