ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ಮಲೆ ಮಹದೇಶ್ವರಸ್ವಾಮಿ ದೇವಸ್ಥಾನದ ಗೋಲಕಗಳ ಎಣಿಕೆ ಕಾರ್ಯವನ್ನು ಬೆಟ್ಟದ ಬಸ್ ನಿಲ್ದಾಣದಲ್ಲಿರುವ ವಾಣಿಜ್ಯ ಸಂಕೀರ್ಣ ಕಟ್ಟಡದ ಮೊದಲ ಮಹಡಿಯ ವಿಶ್ರಾಂತಿ ಗೃಹದಲ್ಲಿ ಮಾರ್ಚ್ 26 ರಂದು ಬೆಳಿಗ್ಗೆ ಸೂಕ್ತ ಪೊಲೀಸ್ ಬಂದೋಬಸ್ತ್‍ನೊಂದಿಗೆ ನಡೆಸಲಾಗುವುದು ಎಂದು ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ರಘು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.