ಹನಗೋಡು: ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆ, ಬುಡಕಟ್ಟು ಕೃಷಿಕರ ಸಂಘ, ಡೀಡ್ ಸಂಸ್ಥೆ ಸಹಯೋಗದಲ್ಲಿ ಆದಿವಾಸಿಗಳಿಗೆ ಕಣ್ಣಿನ ಉಚಿತ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.
ಹನಗೋಡು ಹೋಬಳಿಯ ನೇರಳಕುಪ್ಪೆ ಗಿರಿಜನ ಆಶ್ರಮ ಶಾಲೆಯಲ್ಲಿ ಆಯೋಜಿಸಿದ ಕಣ್ಣಿನ ಉಚಿತ ತಪಾಸಣಾ ಶಿಬಿರವನ್ನು ಶಂಕರ ಕಣ್ಣಿನ ಆಸ್ಪತ್ರೆಯ ಸಂಯೋಜಕ ಹಾಗೂ ಶಿಬಿರದ ಮುಖ್ಯಸ್ಥ ಕುಮಾರ್ ಮಾತನಾಡಿ ಶಂಕರ ಕಣ್ಣಿನ ಆಸ್ಪತ್ರೆಯೂ ಖಾಸಗಿ ಸಂಸ್ಥೆಯಾಗಿದ್ದರೂ ಸೇವೆಯ ಹಿತದೃಷ್ಠಿಯಿಂದ ತಳ ಸಮುದಾಯಗಳಿಗೆ ಸೇವೆ ತಲುಪಿಸುವ ದೃಷ್ಟಿಯಿಂದ ಇಂತಹ ಶಿಬಿರಗಳನ್ನು ಹಮ್ಮಿಕೊಳ್ಳುತ್ತಿದೆ. ನಮ್ಮ ಸಂಸ್ಥೆಗೆ ರಾಷ್ಟ್ರ ಮಟ್ಟದ ಪ್ರಶಸ್ತಿಯು ಲಭಿಸಿದೆ ಎಂದು ತಿಳಿಸಿ, ಕಣ್ಣಿನ ಪರೀಕ್ಷೆ ಮಾಡಿಸಿಕೊಂಡು ಅಗತ್ಯವಿರುವವರಿಗೆ ಉಚಿತ ಕನ್ನಡಕ ನೀಡಲಾಗುವುದು. ಶಸ್ತ್ರ ಚಿಕಿತ್ಸೆ ಅಗತ್ಯವಿರುವ ಜನರನ್ನು ಬೆಂಗಳೂರಿನ ಶಂಕರ ಆಸ್ಪತ್ರೆಗೆ ಕರೆದೊದು ಉಚಿತ ಶಸ್ತ್ರ ಚಿಕಿತ್ಸೆ ನಡೆಸಿ ವಾಪಸ್ ಅವರನ್ನು ಮನೆಗೆ ಕಳುಹಿಸಿ ಕೊಡುವ ಜವಬ್ದಾರಿಯನ್ನು ಆಸ್ಪತ್ರೆಯ ವಹಿಸಿಕೊಂಡಿದೆ ಎಂದರು.
ಶಿಬಿರದಲ್ಲಿ ೭೦ ಮಂದಿ ಆದಿವಾಸಿಗಳು ಕಣ್ಣಿನ ಉಚಿತ ತಪಾಸಣೆ ಮಾಡಿಸಿಕೊಂಡರು. ಈ ಪೈಕಿ ೨೨ ಮಂದಿಯನ್ನು ಶಸ್ತ್ರಚಿಕಿತ್ಸೆಗೆ ಆಯ್ಕೆ ಮಾಡಲಾಯಿತು.
೨೭ ಮಂದಿಗೆ ಉಚಿತ ಕನ್ನಡಕ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಬುಡಕಟ್ಟು ಕೃಷಿಕರ ಸಂಘದ ಅಧ್ಯಕ್ಷ ಪಿ.ಕೆ. ರಾಮು, ಪದಾಧಿಕಾರಿಗಳಾದ ಜಯಪ್ಪ , ಶಿವಣ್ಣ, ಹರ್ಷ, ಅಕ್ಕಯ್ಯಮ್ಮ, ನಾಗು,ಆಶ್ರಮ ಶಾಲೆಯ ಶಿಕ್ಷಕರಾದ ಕೆ.ಕೆ ಸ್ವಾಮಿ, ಲೊಕೇಶ್ ಸೇರಿದಂತೆ ಆಸ್ಪತ್ರೆಯ ವೈದ್ಯರ ತಂಡ ಇದ್ದರು.