ಕೆ.ಆರ್.ನಗರ: ತಾಲೂಕಿನ ಗಂಧನಹಳ್ಳಿ ಗ್ರಾಮದ ನೀರು ಬಳಕೆದಾರರ ಸಂಘದ ನೂತನ ಅಧ್ಯಕ್ಷರಾಗಿ ಜಿ.ಆರ್.ಕೃಷ್ಣೇಗೌಡ ಮತ್ತು ಉಪಾಧ್ಯಕ್ಷೆಯಾಗಿ ವೀಣಾಜಯರಾಮ್ ಅವಿರೋಧವಾಗಿ ಆಯ್ಕೆಯಾದರು.
ಸಂಘದ ಆಡಳಿತ ಕಚೇರಿಯಲ್ಲಿ ಬುಧವಾರ ನಡೆದ ಚುನಾವಣೆಯಲ್ಲಿ ಇವರಿಬ್ಬರನ್ನು ಹೊರತುಪಡಿಸಿ ಬೇರಾರು ನಾಮಪತ್ರ ಸಲ್ಲಿಸದಿದ್ದರಿಂದ ಇವರ ಅವಿರೋಧ ಆಯ್ಕೆಯನ್ನು ಚುನಾವಣಾಧಿಕಾರಿಯಾಗಿದ್ದ ಶಿವಕುಮಾರ್ ಪ್ರಕಟಿಸಿದರು.
ಚುನಾವಣಾ ಸಭೆಯಲ್ಲಿ ನಿರ್ದೇಶಕರಾದ ಜಿ.ಎಸ್.ರಾಜೇಗೌಡ, ಜಿ.ಎಸ್.ನಾಗರಾಜು, ಕಳಸೇಗೌಡ, ಹೆಚ್.ಟಿ.ಮಂಜುಳ, ಅನಿತಾ, ಜವರೇಗೌಡ, ಜಿ.ಆರ್.ಪ್ರಕಾಶ್, ಕಾರ್ಯದರ್ಶಿ ಜಿ.ಕೆ.ಪುಟ್ಟಸ್ವಾಮಿ ಹಾಜರಿದ್ದರು.
ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕಟಗೊಳ್ಳುತ್ತಿದ್ದಂತೆ ಸಂಘದ ನಿರ್ದೇಶಕರು, ಸದಸ್ಯರು ಮತ್ತು ಅವರ ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ವಿತರಿಸಿ ಸಂಭ್ರಮಿಸಿದರು. ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಗಾಂಧಿಶಿವಣ್ಣ, ಗ್ರಾಮದ ಮುಖಂಡರಾದ ಜಿ.ಎನ್.ರಘು, ರಾಮಚಂದ್ರ, ನಾಗೇಗೌಡ, ದೇವೇಂದ್ರ, ಮಹೇಶ್, ನಿಂಗರಾಜು, ರಂಗೇಗೌಡ, ಜಿ.ಕೆ.ಜವರೇಗೌಡ ಸೇರಿದಂತೆ ಗ್ರಾಮಸ್ಥರು ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಅಭಿನಂದಿಸಿದರು.