Monday, April 21, 2025
Google search engine

Homeರಾಜ್ಯಹಿಮಾಚಲ ಪ್ರದೇಶದ 6 ಕಾಂಗ್ರೆಸ್‌ನಿಂದ ಅನರ್ಹಗೊಂಡ ಶಾಸಕರು ಬಿಜೆಪಿಗೆ ಸೇರ್ಪಡೆ

ಹಿಮಾಚಲ ಪ್ರದೇಶದ 6 ಕಾಂಗ್ರೆಸ್‌ನಿಂದ ಅನರ್ಹಗೊಂಡ ಶಾಸಕರು ಬಿಜೆಪಿಗೆ ಸೇರ್ಪಡೆ

ಹೊಸದಿಲ್ಲಿ: ಹಿಮಾಚಲ ಪ್ರದೇಶದಲ್ಲಿನ ರಾಜಕೀಯ ಅನಿಶ್ಚಿತತೆ ಮುಂದುವರಿದಿದ್ದು, ಹಿಮಾಚಲ ಪ್ರದೇಶ ವಿಧಾನಸಭೆಯ ಹಲವಾರು ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿ, ಮುಂದಿನ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಶನಿವಾರ ಮೂಲಗಳು ತಿಳಿಸಿವೆ.

ಆರು ಬಂಡಾಯ ಕಾಂಗ್ರೆಸ್ ಶಾಸಕರಾದ ಸುಧೀರ್ ಶರ್ಮ, ರವಿ ಠಾಕೂರ್, ರಾಜಿಂದರ್ ರಾಣಾ, ಇಂದರ್ ದತ್ ಲಖನ್ ಪಾಲ್, ಚೇತನ್ಯ ಶರ್ಮ ಹಾಗೂ ದೇವಿಂದರ್ ಕುಮಾರ್ ಭುಟ್ಟೊ ಅವರನ್ನು ಫೆಬ್ರವರಿ ೨೯ರಂದು ಅನರ್ಹಗೊಳಿಸಲಾಗಿತ್ತು. ಸದನದಲ್ಲಿ ಹಾಜರಿರಬೇಕು ಹಾಗೂ ಹಿಮಾಚಲ ಪ್ರದೇಶ ಸರಕಾರದ ವಿಶ್ವಾಸ ಮತ ಹಾಗೂ ಬಜೆಟ್ ಪರ ಮತ ಚಲಾಯಿಸಬೇಕು ಎಂಬ ಪಕ್ಷದ ವಿಪ್ ಅನ್ನು ಧಿಕ್ಕರಿಸಿದ್ದರಿಂದ ವಿಧಾನಸಭಾ ಸ್ಪೀಕರ್ ಇವರನ್ನೆಲ್ಲ ಅನರ್ಹಗೊಳಿಸಿದ್ದರು. ಆದರೆ, ಇಂದು (ಮಾರ್ಚ್ ೨೩)ರಂದು ಇವರೆಲ್ಲ ಬಿಜೆಪಿಯನ್ನು ಸೇರ್ಪಡೆಯಾಗಿದ್ದಾರೆ ಎಂದು ವರದಿಯಾಗಿದೆ.

RELATED ARTICLES
- Advertisment -
Google search engine

Most Popular