ಚಿಕ್ಕಮಗಳೂರು: ಲೋಕಸಭಾ ಚುನಾವಣೆ ಹೊತ್ತಲ್ಲಿ ಟೆಂಪಲ್ ರನ್ ಮುಂದುವರಿಸಿರುವ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಕುಟುಂಬ ಸಮೇತರಾಗಿ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಇಂದು ಮುಂಜಾನೆಯಿಂದ ದೇವಾಲಯದಲ್ಲಿ ನಡೆಯುತ್ತಿರುವ ಚಂಡಿಕಾಯಾಗದಲ್ಲಿ ಅವರು ಭಾಗಿಯಾಗಿದ್ದಾರೆ.
ಯಡಿಯೂರಪ್ಪ, ಪುತ್ರ ವಿಜಯೇಂದ್ರ ಹಾಗೂ ರಾಘವೇಂದ್ರ ಅವರು ದೇವಾಲಯಕ್ಕೆ ಆಗಮಿಸಿ, ಅನ್ನಪೂರ್ಣೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ದೇವಾಲಯದಲ್ಲೇ ತಂಗಿದ್ದು, ಇಂದು ಭಾನುವಾರ ಬೆಳಗ್ಗೆ ೭ ಗಂಟೆಗೆ ಆರಂಭಗೊಂಡ ಯಾಗದಲ್ಲಿ ಭಾಗಿಯಾಗಿದ್ದಾರೆ.