ತಿರುವಳ್ಳೂರು : ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ೪ನೇ ಪಟ್ಟಿ ಪ್ರಕಟಿಸಿದೆ. ಪಟ್ಟಿಯಲ್ಲಿ ೪೬ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಕಳೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ವಾರ್‌ರೂಮ್‌ನ ನೇತೃತ್ವ ವಹಿಸಿದ್ದ, ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯೂ ಆಗಿದ್ದ ಸಸಿಕಾಂತ್ ಸೆಂಥಿಲ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.
ತಮಿಳುನಾಡು ಕಾಂಗ್ರೆಸ್‌ನಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಸೆಂಥಿಲ್ ಅವರು ತಮಿಳುನಾಡಿನ ತಿರುವಳ್ಳೂರು ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದಾರೆ. ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ, ರಾಜ್ಯಸಭಾ ಸದಸ್ಯ ದಿಗ್ವಿಜಯ್ ಸಿಂಗ್ ಅವರು ಮಧ್ಯಪ್ರದೇಶದ ರಾಜ್‌ಗರ್ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದಾರೆ. ಪಿ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರನ್ನು ತಮಿಳುನಾಡಿನ ಸಿವಗಂಗಾದಿಂದ ಕಣಕ್ಕಿಳಿಸಲಾಗಿದೆ.
ಕಾಂಗ್ರೆಸ್ ನಾಲ್ಕನೇ ಪಟ್ಟಿಯಲ್ಲಿ ಮಧ್ಯಪ್ರದೇಶದ ೧೨, ಉತ್ತರ ಪ್ರದೇಶದ ೯, ತಮಿಳುನಾಡಿನ ೭, ಮಹಾರಾಷ್ಟ್ರದ ೪, ರಾಜಸ್ಥಾನದ ೩, ಉತ್ತರಾಖಂಡ, ಮಣಿಪುರ ಹಾಗೂ ಜಮ್ಮು ಮತ್ತು ಕಾಶ್ಮೀರ ರಾಜ್ಯಗಳಲ್ಲಿ ತಲಾ ೨ ಹಾಗೂ ಅಸ್ಸಾ, ಅಂಡಮಾನ್ ನಿಕೋಬಾರ್, ಛತ್ತೀಸ್‌ಗಢ, ಮಿಜೋರಾಂ ಮತ್ತು ಪಶ್ಚಿಮ ಬಂಗಾಳದ ತಲಾ ೧ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.