Tuesday, April 22, 2025
Google search engine

Homeರಾಜ್ಯಅರವಿಂದ್ ಕೇಜ್ರಿವಾಲ್ ಬಂಧನ ಖಂಡಿಸಿ ಪ್ರಧಾನಿ ನಿವಾಸಕ್ಕೆ ಮುತ್ತಿಗೆ: ಸೆಕ್ಷನ್ ೧೪೪ ಜಾರಿ

ಅರವಿಂದ್ ಕೇಜ್ರಿವಾಲ್ ಬಂಧನ ಖಂಡಿಸಿ ಪ್ರಧಾನಿ ನಿವಾಸಕ್ಕೆ ಮುತ್ತಿಗೆ: ಸೆಕ್ಷನ್ ೧೪೪ ಜಾರಿ

ಹೊಸದಿಲ್ಲಿ: ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನವನ್ನು ವಿರೋಧಿಸಿ ಪಟೇಲ್ ಚೌಕ್ ಮೆಟ್ರೋ ನಿಲ್ದಾಣದ ಹೊರಗಿನಿಂದ ಲೋಕಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನಿವಾಸದತ್ತ ಮೆರವಣಿಗೆ ನಡೆಸುತ್ತಿದ್ದ ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡರು ಮತ್ತು ಕಾರ್ಯಕರ್ತರನ್ನು ದಿಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸೆಕ್ಷನ್ ೧೪೪ ಜಾರಿಗೊಳಿಸಿದ್ದರಿಂದ ಪ್ರತಿಭಟನೆ ನಡೆಸಲು ಅನುಮತಿ ಇಲ್ಲ ಎಂದು ದಿಲ್ಲಿ ಪೊಲೀಸರು ಹೇಳಿದ್ದಾರೆ. ಪ್ರತಿಭಟನೆಯ ಹಿನ್ನೆಲೆಯಲ್ಲಿ ದೆಹಲಿ ಟ್ರಾಫಿಕ್ ಪೊಲೀಸರು ಪ್ರಮುಖ ಮಾರ್ಗಗಳಲ್ಲಿ ಮಾರ್ಗ ಬದಲಾವಣೆ ಮಾಡಿದ್ದಾರೆ. ತುಘಲಕ್ ರಸ್ತೆ, ಸಫ್ದರ್ಜಂಗ್ ರಸ್ತೆ ಮತ್ತು ಕೆಮಾಲ್ ಅಟಾತುರ್ಕ್ ಮಾರ್ಗದಲ್ಲಿ ಎಲ್ಲಿಯೂ ವಾಹನಗಳನ್ನು ನಿಲ್ಲಿಸಲು ಅನುಮತಿಸುವುದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular