Saturday, April 19, 2025
Google search engine

Homeವಿದೇಶಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟ: ಐವರು ಚೀನಾ ಪ್ರಜೆಗಳು ಸಾವು

ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟ: ಐವರು ಚೀನಾ ಪ್ರಜೆಗಳು ಸಾವು

ಪೇಶಾವರ: ವಾಯವ್ಯ ಪಾಕಿಸ್ತಾನದಲ್ಲಿ ಮಂಗಳವಾರ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ ಐವರು ಚೀನಾ ಪ್ರಜೆಗಳು ಸಾವಿಗೀಡಾಗಿದ್ದಾರೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಸ್ಲಾಮಾಬಾದ್‌ ನಿಂದ ಖೈಬರ್ ಪಖ್ತುನ್‌ ಖ್ವಾ ಪ್ರಾಂತ್ಯದ ದಾಸುನಲ್ಲಿರುವ ತಮ್ಮ ಶಿಬಿರಕ್ಕೆ ತೆರಳುತ್ತಿದ್ದ ಚೀನಾದ ಇಂಜಿನಿಯರ್‌ಗಳ ಬೆಂಗಾವಲು ವಾಹನಕ್ಕೆ ಆತ್ಮಾಹುತಿ ಬಾಂಬರ್, ಸ್ಫೋಟಕ ತುಂಬಿದ ವಾಹನವನ್ನು ಡಿಕ್ಕಿ ಹೊಡೆದಿದ್ದಾನೆ ಎಂದು ಪ್ರಾದೇಶಿಕ ಪೊಲೀಸ್ ಮುಖ್ಯಸ್ಥ ಮೊಹಮ್ಮದ್ ಅಲಿ ಗಂದಾಪುರ್ ಸುದ್ದಿ ಸಂಸ್ಥೆ ರಾಯಿಟರ್ಸ್‌ ಗೆ ತಿಳಿಸಿದ್ದಾರೆ.

ದಾಳಿಯಲ್ಲಿ ಐವರು ಚೀನಿ ಪ್ರಜೆಗಳು ಮತ್ತು ಅವರ ಪಾಕಿಸ್ತಾನಿ ಚಾಲಕ ಸಾವಿಗೀಡಾಗಿದ್ದಾನೆ ಎಂದು ಮೊಹಮ್ಮದ್ ಅಲಿ ಗಂಡಾಪುರ್ ಹೇಳಿದ್ದಾರೆ.

ದಾಸು ಪ್ರಮುಖ ಅಣೆಕಟ್ಟಿನ ತಾಣವಾಗಿದ್ದು, ಈ ಪ್ರದೇಶದಲ್ಲಿ ಈ ಹಿಂದೆಯೂ ದಾಳಿ ನಡೆದಿದೆ. 2021ರಲ್ಲಿ ಬಸ್‌ ನಲ್ಲಿ ನಡೆದ ಸ್ಫೋಟದಲ್ಲಿ ಒಂಬತ್ತು ಚೀನಾ ಪ್ರಜೆಗಳು ಸೇರಿದಂತೆ 13 ಮಂದಿ ಸಾವಿಗೀಡಾಗಿದ್ದರು. ಖೈಬರ್ ಪಖ್ತುಂಖ್ವಾ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಹಾರ ಕಾರ್ಯಾಚರಣೆ ಆರಂಭಿಸಿದ್ದಾರೆ. ಬೆಂಗಾವಲು ಪಡೆಯಲ್ಲಿ ಉಳಿದವರಿಗೆ ರಕ್ಷಣೆ ನೀಡಲಾಗಿದೆ ಎಂದು ಮೊಹಮ್ಮದ್ ಅಲಿ ಗಂದಾಪುರ್ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular