Sunday, April 20, 2025
Google search engine

Homeಸ್ಥಳೀಯಗ್ಯಾರೆಂಟಿ ಯೋಜನೆಗಳಿಂದ ರಾಜ್ಯದಲ್ಲಿ ನೆಮ್ಮದಿಯ ಬದುಕು : ಕೆ ಮರಿಗೌಡ

ಗ್ಯಾರೆಂಟಿ ಯೋಜನೆಗಳಿಂದ ರಾಜ್ಯದಲ್ಲಿ ನೆಮ್ಮದಿಯ ಬದುಕು : ಕೆ ಮರಿಗೌಡ

ಮೈಸೂರು: ಇಂದು ಮಂಗಳವಾರದಂದು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಮುಂಚೂಣಿ ಘಟಕದ ಅಧ್ಯಕ್ಷರುಗಳ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ.

ಮುಂಬರುವ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆ ಅಂಗವಾಗಿ “ದಿನಾಂಕ ೨೭.೦೩.೨೦೨೪” ಬುಧವಾರ ಮಧ್ಯಾಹ್ನ ೩.೦೦ ಗಂಟೆಗೆ ಕಾಂಗ್ರೆಸ್ ಪಕ್ಷದ ಆವರಣದಲ್ಲಿ ನಡೆಯುವ ಸಭೆಗೆ ಚಾಮುಂಡೇಶ್ವರಿ ಕ್ಷೇತ್ರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು, ಮುಖಂಡರು, ಮಹಿಳಾ ಘಟಕದ ಪದಾಧಿಕಾರಿಗಳು, ಮುಂಚೂಣಿ ಘಟಕದ ಅಧ್ಯಕ್ಷರುಗಳು, ಹಾಗೂ ಎಲ್ಲಾ ಹಂತದ ಪದಾಧಿಕಾರಿಗಳು, ಪಕ್ಷದ ಅಭಿಮಾನಿಗಳು, ಯೂಥ್ ಕಾಂಗ್ರೆಸ್, ಎನ್ ಎಸ್ ಯು ಐ, ಸೇವಾ ದಳ, ಎಲ್ಲಾ ಹಂತದ ಮಹಿಳಾ ಘಟಕದ ಪದಾಧಿಕಾರಿಗಳು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕರೆ ನೀಡಿದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಾಗಿ ಪಕ್ಷದ ಪರವಾಗಿ ಕೆಲಸ ಮಾಡಬೇಕೆಂದು ಮನವಿ ಮಾಡಿದರು.ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಒಂದೇ ತಿಂಗಳಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಸನ್ಮಾನ್ಯ ಶ್ರೀ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ನಾಯಕತ್ವದಲ್ಲಿ ಅನುಷ್ಠಾನಗೊಳಿಸಿರುವುದು ಇಡೀ ರಾಜ್ಯದ ಜನರ ಮೆಚ್ಚುಗೆಗೆ ಪಾತ್ರರಾಗಿದೆ.
ಐದು ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಎಲ್ಲಾ ಕುಟುಂಬಗಳು ನೆಮ್ಮದಿಯ ಬದುಕನ್ನು ಕಾಣಲು ಸಾಧ್ಯವಾಗಿದೆ ಉದಾಹರಣೆ ಗೃಹಲಕ್ಷ್ಮಿ ಯೋಜನೆಯಿಂದ ಒಂದು ಕೋಟಿ ಇಪ್ಪತ್ತು ಲಕ್ಷ ಕುಟುಂಬಗಳಿಗೆ ಪ್ರತಿ ತಿಂಗಳು ೨೦೦೦ ಮನೆ ಯಜಮಾನಿಯ ಖಾತೆಗೆ ಬರುತ್ತಿರುವುದು ಹಾಗೂ ಗೃಹ ಜ್ಯೋತಿ ಯೋಜನೆಯಿಂದ ರಾಜ್ಯದ ಎಲ್ಲಾ ಜನರಿಗೂ ಉಚಿತ ೨೦೦ ಯೂನಿಟ್ ಸೌಲಭ್ಯ ಸಿಗುತ್ತಿರುವುದು, ಮತ್ತು ಅನ್ನಭಾಗ್ಯ ಯೋಜನೆಯಿಂದ ಸುಮಾರು ೪.೫ ಕೋಟಿ ಜನರಿಗೆ ಸೌಲಭ್ಯ ಸಿಕ್ಕಿರುವುದು ಹಾಗೂ ಶಕ್ತಿ ಯೋಜನೆಯಿಂದ ರಾಜ್ಯದ ಎಲ್ಲಾ ಮಹಿಳೆಯರಿಗೂ ಉಚಿತವಾಗಿ ಬಸ್ ಸೌಕರ್ಯ ಕಲ್ಪಿಸಿರುವುದು ಹಾಗೂ ಯುವ ನಿಧಿ ಯೋಜನೆಯಿಂದ ಪದವೀಧರರಿಗೆ ಪ್ರತಿ ತಿಂಗಳು ೩೦೦೦ ರೂಗಳು ಹಾಗೂ ಡಿಪ್ಲೋಮೋ ಪದವೀಧರರಿಗೆ ೧೫೦೦ರೂಗಳು. ಈ ಸೌಲಭ್ಯಗಳು ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ಎಲ್ಲಾ ವರ್ಗದ ಜನರಿಗೂ ದೊರಕಿದ್ದು ನಮ್ಮ ಸರ್ಕಾರದ ಈ ಯೋಜನೆ ತಲುಪಿರುವುದು ಶ್ಲಾಘನೀಯ.

ಇದರಿಂದ ರಾಜ್ಯದ ಜನತೆಯು ಪ್ರತಿ ತಿಂಗಳು ಆರರಿಂದ ಏಳು ಸಾವಿರದವರೆಗೂ ಸೌಲಭ್ಯಗಳನ್ನು ಪಡೆಯುತ್ತಿದ್ದು ನೆಮ್ಮದಿಯ ಜೀವನವನ್ನು ಮಾಡುತ್ತಿದ್ದಾರೆ. ಆದ್ದರಿಂದ ನಾವೆಲ್ಲರೂ ಕೂಡ ಪಕ್ಷದ ಪರವಾಗಿ ಗ್ಯಾರೆಂಟಿ ಯೋಜನೆಗಳನ್ನು ಜನರಿಗೆ ತಿಳಿಸಿ ಜನರಿಗೆ ಮನವಿ ಮಾಡಿ ನಮ್ಮ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕೆಂದು ಕೋರಿದರು. ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಎಲ್ಲಾ ಜನರು ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರೇ ನಮ್ಮ ಶಾಸಕರು, ಮುಖ್ಯಮಂತ್ರಿಗಳು ಎಂದು ತಿಳಿದು ಎಲ್ಲರೂ ಒಗ್ಗಟ್ಟಿನಿಂದ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕೆಂದು ಕರೆ ನೀಡಿದರು. ಬಿಜೆಪಿ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಯನ್ನು ಮತದಾರರಿಗೆ ತಿಳಿಸಿ ಅವರ ವೈಫಲ್ಯವನ್ನು ಮನಮುಟ್ಟುವಂತೆ ಮಾಡುವುದು ನಮ್ಮೆಲ್ಲರ ಕರ್ತವ್ಯ ಈ ಚುನಾವಣೆಯಲ್ಲಿ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರ ನಾಯಕತ್ವದಲ್ಲಿ ಮೈಸೂರು ಹಾಗೂ ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಅಧಿಕ ಮತದಿಂದ ನಮ್ಮ ಪಕ್ಷದ ಅಭ್ಯರ್ಥಿ “ಎಂ ಲಕ್ಷ್ಮಣ್ ” ಅವರು ಗೆಲುವಿನ ಪೂರ್ಣ ವಿಶ್ವಾಸವಿದೆ ಎಂದು ಹೇಳುತ್ತಾ ಎಲ್ಲಾ ಜಾತಿ ವರ್ಗದವರು ಕೂಡ ನಮ್ಮ ಪಕ್ಷದ ಪರವಾಗಿ ಒಲವು ಇರುವುದರಿಂದ ನಾವೆಲ್ಲರೂ ಕೂಡ ವಿನಯದಿಂದ ಮತಯಾಚನೆ ಮಾಡಬೇಕೆಂದು ಕರೆ ನೀಡಿದರು.

ಈ ಸಭೆಯಲ್ಲಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ, ಇಲವಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗುರುಸ್ವಾಮಿ, ಚಾಮುಂಡೇಶ್ವರಿ ಬ್ಲಾಕ್ ಅಧ್ಯಕ್ಷರಾದ ಜೆ ಸತೀಶ್ ಕುಮಾರ್ ಮಾಜಿ ಮೇಯರ್ ಚಿಕ್ಕಣ್ಣ, ಮಹಿಳಾ ಘಟಕದ ಅಧ್ಯಕ್ಷರುಗಳಾದ ಭಾಗ್ಯ ಲೋಕೇಶ್ ಹಾಗೂ ನಾಗರತ್ನ ಹಾಗೂ ಎಲ್ಲಾ ಮುಂಚೂಣಿ ಘಟಕದ ಅಧ್ಯಕ್ಷರುಗಳು ಪಾಲ್ಗೊಂಡಿದ್ದರು.

RELATED ARTICLES
- Advertisment -
Google search engine

Most Popular