ಬೆಂಗಳೂರು: ಪ್ರಥಮ ಪಿಯು ಪೂರಕ ಪರೀಕ್ಷೆ ಮೇ 20ರಿಂದ ಮೇ 31ರವರೆಗೆ ನಡೆಯಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೇಳಾಪಟ್ಟಿ ಪ್ರಕಟಿಸಿದೆ.
ಪೂರಕ ಪರೀಕ್ಷೆ ನಡೆಸುವ ಸಂಪೂರ್ಣ ಜವಾಬ್ದಾರಿ ಜಿಲ್ಲಾ ಉಪ ನಿರ್ದೇಶಕರಿಗೆ ಸೇರಿದೆ. ಮಾರ್ಚ್ 30ಕ್ಕೆ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಿಸುವ ಸಮಯದಲ್ಲಿ ಪೂರಕ ಪರೀಕ್ಷೆಗೆ ಶುಲ್ಕ ಕಟ್ಟಲು ಅನುವಾಗುವಂತೆ ಕಾಲೇಜುಗಳ ಸೂಚನಾ ಫಲಕದಲ್ಲಿ ಪೂರಕ ಪರೀಕ್ಷೆಯ ವಿವರಗಳನ್ನು ಪ್ರಕಟಿಸುವಂತೆ ಕೆಎಸ್ ಇಎಬಿ(KSEAB) ಸೂಚನೆ ನೀಡಿದೆ. ಪೂರಕ ಪರೀಕ್ಷೆಗೆ ಶುಲ್ಕ ಕಟ್ಟಲು ಏಪ್ರಿಲ್ 20 ಕೊನೆಯ ದಿನವಾಗಿದೆ.ಜೂನ್ 6ರಂದು ಫಲಿತಾಂಶ ಪ್ರಕಟಿಸಬೇಕು ಎಂದು ಸೂಚಿಸಲಾಗಿದೆ.