ಮಡಿಕೇರಿ: ಇದೇ ಎಪ್ರಿಲ್, ೦೫, ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್ ರಾಂ ಅವರ ೧೧೭ನೇ ಜನ್ಮದಿನಾಚರಣೆ ಹಾಗೂ ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೩ನೇ ಜನ್ಮದಿನಾಚರಣೆಯನ್ನು ಗಾಂಧಿ ಭವನದಲ್ಲಿ ಸರಳವಾಗಿ ಆಚರಿಸಲು ನಿರ್ಧರಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಮುಂಜಾಗ್ರತಾ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ಲೋಕಸಭೆ ಚುನಾವಣೆಯ ಕಾರಣ ಮಾದರಿ ನೀತಿ ಸಂಹಿತೆ ಜಾರಿಯಿಂದಾಗಿ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಮತ್ತು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನವನ್ನು ಸರಳ ರೀತಿಯಲ್ಲಿ ಆಚರಿಸಲು ನಿರ್ಧರಿಸಲಾಗಿದೆ.
ಏಪ್ರಿಲ್ ೦೫ ರಂದು ಬಾಬು ಜಗಜೀವನ್ ರಾಂ ಅವರ ೧೧೭ ನೇ ಜನ್ಮದಿನ ಮತ್ತು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನದ ಪ್ರಯುಕ್ತ ಅ.೧೪ ರಂದು ಬೆಳಿಗ್ಗೆ ೧೦.೩೦ ಕ್ಕೆ ನಗರದ ಗಾಂಧಿ ಭವನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲು ಡಾ.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡ ಎಚ್. ಎಲ್.ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಅಂಬೇಡ್ಕರ್ ಪ್ರತಿಮೆ ಇಲ್ಲ. ಹಾಗಾಗಿ ನಗರದಲ್ಲಿ ಅಂಬೇಡ್ಕರ್ ಪ್ರತಿಮೆ ನಿರ್ಮಿಸುವಂತೆ ಮನವಿ ಮಾಡಿದರು.ಈ ವೇಳೆ ಮಾತನಾಡಿದ ನಾಗರಿಕ ವಿಜಯ್, ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ ಅಂತಿಮ ರೂಪ ನೀಡಬೇಕೆಂದು ಸಭೆಯ ಗಮನಕ್ಕೆ ತಂದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಅಂಬೇಡ್ಕರ್ ಪ್ರತಿಮೆ ಸ್ಥಾಪನೆಗೆ ಜಾಗವನ್ನು ಜೂ.೪ರ ನಂತರ ಅಂತಿಮಗೊಳಿಸುವಂತೆ ಸೂಚಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಪ್ರಮುಖರಾದ ಪ್ರೇಮ್ ಕುಮಾರ್, ಪ್ರೇಮಾ ಕೃಷ್ಣಪ್ಪ, ಜಯರಾಮ, ಸಿದ್ದೇಶ್ವರ, ಕುಮಾರ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.