ಬೆಂಗಳೂರು : ಮಹಿಳಾ ಪ್ರಯಾಣಿಕರೋರ್ವರ ಮೇಲೆ ಬಿಎಂಟಿಸಿ ಕಂಡಕ್ಟರ್ ಓರ್ವ ಹಿಗ್ಗಾಮುಗ್ಗಾ ಹಲ್ಲೆ ಎಸಗಿದ ಘಟನೆಗೆ ಸಂಬಂಧಿಸಿದಂತೆ ಕಂಡಕ್ಟರ್ ಹೊನ್ನಪ್ಪ ನಾಗಪ್ಪ ಅಗಸರ್ ಅವರನ್ನು ಅಮಾನತು ಮಾಡಲಾಗಿದೆ.
ಬಿಎಂಟಿಸಿ ಬಸ್‌ನಲ್ಲಿ ಸಂಚರಿಸುತ್ತಿದ್ದ ಹೊರ ರಾಜ್ಯದ ಓರ್ವ ಮಹಿಳಾ ಪ್ರಯಾಣಿಕರೊಬ್ಬರಿಗೆ ಟಿಕೆಟ್ ಪಡೆಯುವ / ನೀಡುವ ವಿಚಾರವಾಗಿ ಪ್ರಯಾಣಿಕರು ಮತ್ತು ನಿರ್ವಾಹಕರ ನಡುವೆ ಮಾತಿನ ಚಕಮಕಿ ನಡೆದಿದ್ದು, ಆ ಸಂದರ್ಭದಲ್ಲಿ ನಿರ್ವಾಹಕರು ಮಹಿಳಾ ಪ್ರಯಾಣಿಕರನ್ನು ಹೊಡೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋ ಆಧಾರದಲ್ಲಿ ಕಂಡಕ್ಟರ್ ಮೇಲೆ ಶಿಸ್ತು ಕ್ರಮವನ್ನು ಕಾಯ್ದಿರಿಸಿ ಈ ಕೂಡಲೇ ಜಾರಿಗೆ ಬರುವಂತೆ ವಿಚಾರಣಾ ಇತ್ಯರ್ಥ ಪೂರ್ವ ಅಮಾನತು ಮಾಡಲಾಗಿದೆ ಎಂದು ಬಿಎಂಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.
ಆ ಸಂದರ್ಭದಲ್ಲಿ ನಿರ್ವಾಹಕರು ಮಹಿಳಾ ಪ್ರಯಾಣಿಕರನ್ನು ಹೊಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಸಂಬಂಧ, ಮಹಿಳಾ ಪ್ರಯಾಣಿಕರು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ವಿಚಾರಣೆ ನಡೆಯುತ್ತಿದೆ.