ಬೆಂಗಳೂರು: ಲೋಕಸಭಾ ಚುನಾವಣೆ ದಿನಾಂಕ ನಿಗದಿಯಾಗಿದ್ದು, ನೀತಿ ಸಂಹಿತೆ ಜಾರಿಯಲ್ಲಿದೆ. ಇದೀಗ, ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ಧರ್ಮರಾಯಸ್ವಾಮಿ ದೇವಸ್ಥಾನದ ಬಳಿ ದಾಖಲೆ ಇಲ್ಲದೆ, ಸಾಗಿಸುತ್ತಿದ್ದ ೨೫ ಲಕ್ಷ ಹಣವನ್ನು ಚುನಾವಣಾ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ನಗರದ ಧರ್ಮರಾಯಸ್ವಾಮಿ ದೇವಸ್ಥಾನದ ಬಳಿ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಪ್ರಕರಣದ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ. ಹಾಗೆಯೇ, ದಾಖಲೆ ಇಲ್ಲದೆ ಸಾಗಿಸುತ್ತಿದ್ದ ೧೯೯ ಎಲ್‌ಇಡಿ ಟಿವಿಗಳನ್ನು ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.