Monday, April 21, 2025
Google search engine

Homeರಾಜ್ಯಸುದ್ದಿಜಾಲಲೋಕಸಭೆ ಚುನಾವಣೆ: ಮತದಾರರ ಜಾಗೃತಿಗಾಗಿ ಬೈಕ್ ರ್‍ಯಾಲಿ, ರಾಜ್ಯ ಸ್ವೀಪ್ ನೋಡಲ್ ಅಧಿಕಾರಿಯಿಂದ ಚಾಲನೆ

ಲೋಕಸಭೆ ಚುನಾವಣೆ: ಮತದಾರರ ಜಾಗೃತಿಗಾಗಿ ಬೈಕ್ ರ್‍ಯಾಲಿ, ರಾಜ್ಯ ಸ್ವೀಪ್ ನೋಡಲ್ ಅಧಿಕಾರಿಯಿಂದ ಚಾಲನೆ

ದಾವಣಗೆರೆ: ಮೇ ೭ ರಂದು ಲೋಕಸಭೆ ಚುನಾವಣೆ ನಡೆಯಲಿದ್ದು, ವಿಶೇಷಚೇತನರೆಲ್ಲರೂ ಶೇ ೧೦೦ರಷ್ಟು ಮತದಾನ ಮಾಡಬೇಕು ಎಂದು ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ್ ಕರೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ದಾವಣಗೆರೆಯ ಸಹಯೋಗದಲ್ಲಿ ಬುಧವಾರ ಜಿಲ್ಲಾ ಪಂಚಾಯಿತಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ವಿಶೇಷ ಜಾಗೃತ ಬೈಕ್ ರ್‍ಯಾಲಿ ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲಾ ಪಂಚಾಯಿತಿಯಿಂದ ಜಿಲ್ಲಾಧಿಕಾರಿ ಕಚೇರಿಗೆ. ವಿಶೇಷಚೇತನರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶೇ.೯೭ರಷ್ಟು ಮತದಾನ ಮಾಡಿದ್ದು, ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಶೇ.೧೦೦ರಷ್ಟು ಮತಗಳು ಚಲಾವಣೆಯಾಗುವ ವಿಶ್ವಾಸವಿದೆ. ಚುನಾವಣೆ ಪ್ರಜಾಪ್ರಭುತ್ವದ ಹಬ್ಬ, ಎಲ್ಲರೂ ಸೇರಿ ಮತದಾನ ಮಾಡಿ ಉತ್ತಮ ಪ್ರಜಾಪ್ರಭುತ್ವ ಪ್ರತಿನಿಧಿಯನ್ನು ಆಯ್ಕೆ ಮಾಡಬೇಕು.

ಜಿಲ್ಲಾ ಪಂಚಾಯಿತಿ ಆವರಣದಿಂದ ಹದಡಿ ರಸ್ತೆ, ಜಯದೇವ ವೃತ್ತ, ಪಿ.ಬಿ.ರಸ್ತೆ, ಮಹಾನಗರ ಪಾಲಿಕೆ ಮೂಲಕ ರ್‍ಯಾಲಿ ಅಂತಿಮವಾಗಿ ಜಿಲ್ಲಾಧಿಕಾರಿ ಕಚೇರಿ ತಲುಪಿತು. ರ್ಯಾಲಿಯ ಸಮಾರೋಪದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ವೆಂಕಟೇಶ ಎಂ. ಭಾಗವಹಿಸಿ ಮಾತನಾಡಿ ಪ್ರತಿಯೊಬ್ಬರ ಪಾಲ್ಗೊಳ್ಳುವಿಕೆ ಪ್ರಜಾಪ್ರಭುತ್ವ, ಪ್ರಜಾಪ್ರಭುತ್ವದಲ್ಲಿ ಮತದಾನ ಮಾಡುವುದು ನಾಗರಿಕರ ಶಕ್ತಿ, ಮೇ ೭ ರಂದು ಮತದಾನ ಮಾಡುವ ಮೂಲಕ ನಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕಾಗಿದೆ ಎಂದು ವಿ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಸುರೇಶ್. ಬಿ.ಇಟ್ನಾಳ್, ಪಾಲಿಕೆ ಆಯುಕ್ತೆ ರೇಣುಕಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ವಸಂತಿ ಉಪ್ಪಾರ್, ಅಂಗವಿಕಲರ ಕಲ್ಯಾಣಾಧಿಕಾರಿ ಕೆ.ಕೆ.ಪ್ರಕಾಶ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular