ರಾಮನಗರ: ರಾಮನಗರ ಜಿಲ್ಲಾ ವ್ಯಾಪ್ತಿಯ ಎಲ್ಲಾ ಆರೋಗ್ಯ ಸಂಸ್ಥೆಗಳಲ್ಲಿ ವೈದ್ಯಾಧಿಕಾರಿಗಳು ಹಾಗೂ ಇತರೆ ಸಿಬ್ಬಂದಿಗಳು ಸರ್ಕಾರದ ಆದೇಶದಂತೆ ಬಯೋಮೆಟ್ರಿಕ್ ಹಾಜರಾತಿಯನ್ನು ಬೆಳಿಗ್ಗೆ ಮತ್ತು ಸಾಯಂಕಾಲ ಕಡ್ಡಾಯವಾಗಿ ಮಾಡಬೇಕು. ವೈದ್ಯರು ಮತ್ತು ಸಿಬ್ಬಂದಿಗಳು ಒಂದುವೇಳೆ ತಡವಾಗಿ ಕರ್ತವ್ಯಕ್ಕೆ ಹಾಜರಾಗುವುದರಿಂದ ಸರಿಯಾದ ಸಮಯಕ್ಕೆ ಚಿಕಿತ್ಸೆ ಲಬಿಸದೆ ರೋಗಿಗಳು ಪರದಾಡುವ ಸ್ಥಿತಿ ಉಂಟಾಗುತ್ತದೆ. ಆದ್ದರಿಂದ ಎಲ್ಲಾ ಸಿಬ್ಬಂದಿಗಳು ಕಡ್ಡಾಯವಾಗಿ ಸಮಯ ಪಾಲನೆ ಮಾಡಬೇಕು. ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ಬಂದ ರೋಗಿಗಳಿಗೆ ಲಭ್ಯವಿರುವ ಚಿಕಿತ್ಸೆಯನ್ನು ನೀಡುವ ಮೂಲಕ ಸಾರ್ವಜನಿರಿಂದ ಯಾವುದೇ ದೂರುಗಳು ಬಾರದಂತೆ ಉತ್ತಮ ಆರೋಗ್ಯ ಸೇವೆ ನೀಡಬೇಕೆಂದು ವೈದ್ಯಾಧಿಕಾರಿಗಳಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಾಂತರಾಜು ಅವರು ತಿಳಿಸಿದರು.
ಅವರು ರಾಮನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ವತಿಯಿಂದ ಜಿಲ್ಲಾ ತರಬೇತಿ ಕೇಂದ್ರದ ಅರ್ಕಾವತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ವೈದ್ಯಾಧಿಕಾರಿಗಳ ವಿಶೇಷ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬೆಂಗಳೂರಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯದ ಯೋಜನಾ ನಿರ್ದೇಶಕರಾದ (ಆರ್.ಸಿ.ಹೆಚ್.) ಡಾ. ಶ್ರೀನಿವಾಸ್ ಅವರು ಮಾತನಾಡಿ, ರಾಮನಗರ ಜಿಲ್ಲಾ ವ್ಯಾಪ್ತಿಯ ಎಲ್ಲಾ ಆರೋಗ್ಯ ಸಂಸ್ಥೆಗಳಲ್ಲಿ ರಾಷ್ಟಿçÃಯ ಆರೋಗ್ಯ ಅಭಿಯಾನ ಕಾರ್ಯಕ್ರಮಗಳ ಪ್ರಗತಿ ಕುರಿತಂತೆ ಪರಿಶೀಲನೆ ಮಾಡಿ, ಉತ್ತಮ ಸಾಧನೆ ಮಾಡಿರುವುದಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು. ಆರ್.ಸಿ.ಹೆಚ್. ಕಾರ್ಯಕ್ರಮದಡಿಯಲ್ಲಿ ಎಲ್ಲಾ ಗರ್ಭಿಣಿಯರನ್ನು ಸಕಾಲದಲ್ಲಿ ನೊಂದಣಿ ಮಾಡಿ ತಾಯಿ ಕಾರ್ಡ್ ವಿತರಿಸಬೇಕು, ಪಿ.ಎಂ.ಎಸ್.ಎA.ಎ ಅಡಿಯಲ್ಲಿ ಗರ್ಭಿಣಿಯರಿಗೆ ಉತ್ತಮ ಸೇವೆ ನೀಡಿ ಸುರಕ್ಷಿತವಾಗಿ ಹೆರಿಗೆ ಮಾಡುವುದು. ಜನಿಸಿದ ಎಲ್ಲಾ ಮಕ್ಕಳಿಗೂ ಸಾರ್ವಜನಿಕ ಲಸಿಕಾ ಕಾರ್ಯಕ್ರಮದಡಿಯಲ್ಲಿ ಚುಚ್ಚುಮದ್ದು ನೀಡಬೇಕು, ಜನನಿ ಸುರಕ್ಷ ಮತ್ತು ಶಿಶು ಸುರಕ್ಷಾ ಯೋಜನೆ, ಗೃಹ ಆಧಾರಿತ ನವಜಾತ ಶಿಶುಗಳ ಆರೈಕೆ, ಸ್ನೇಹ ಕ್ಲೀನಿಕ್, ಅನಿಮೀಯ ಮುಕ್ತ ಭಾರತ್ ಸಮರ್ಪಕವಾಗಿ ನಿರ್ವಹಿಸಬೇಕು 24/7 ಮತ್ತು ಸಮುದಾಯ ಆರೋಗ್ಯ ಕೇಂದ್ರ, ಸಾರ್ವಜನಿಕ ಆಸ್ಪತ್ರೆ ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಹೆಚ್ಚಿನ ಹೆರಿಗೆ ಮಾಡುವುದರಿಂದ ಫಲಾನುಭವಿಗಳಿಗೆ ಉಂಟಾಗುವ ಆರ್ಥಿಕ ತೊಂದರೆಯನ್ನು ನಿವಾರಿಸಬಹುದೆಂದು ತಿಳಿಸಿದರು.
ಎನ್.ಸಿ.ಡಿ ಕಾರ್ಯಕ್ರಮದಡಿಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಶಿಬಿರಗಳನ್ನು ಆಯೋಜಿಸಿ ಪ್ರಾರಂಭಿಕ ಹಂತದಲ್ಲಿಯೇ ಮಧುಮೇಹ, ರಕ್ತದೊತ್ತಡ, ಕ್ಯಾನ್ಸರ್ ಇನ್ನಿತರೆ ಖಾಯಿಲೆಗಳನ್ನು ಪತ್ರೆ ಮಾಡಿ ಶೀಘ್ರ ಚಿಕಿತ್ಸೆ ನೀಡುವುದರಿಂದ ರೋಗಿಗಳಿಗೆ ಉಂಟಾಗಬಹುದಾದ ಆರೋಗ್ಯ ಸಮಸ್ಯೆಗಳನ್ನು ನಿಯಂತ್ರಿಸಬಹುದು. ಇತ್ತೀಚಿನ ದಿನಗಳಲ್ಲಿ ಕ್ಷಯ ರೋಗ ವ್ಯಾಪಕವಾಗಿ ಹರಡುತ್ತಿದ್ದು ಶಂಕಿತ ಪ್ರಕರಣಗಳ ಪತ್ತೆ ಹಚ್ಚುವುದು ಅವಶ್ಯಕವಾಗಿದ್ದು ಸ್ಥಳೀಯ ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ಸಮೀಕ್ಷೆ ಮತ್ತು ಶಿಬಿರಗಳನ್ನು ಆಯೋಜಿಸಿ ಕ್ಷಯ ಉಲ್ಭಣಗೊಳ್ಳದಂತೆ ಮಾಡಬೇಕು. ರೋಗ ವಾಹಕ ಆಶ್ರಿತ ರೋಗಗಳಾದ ಮಲೇರಿಯ, ಡೆಂಗಿ, ಚಿಕುನ್ ಗುನ್ಯ, ನಿಯಂತ್ರಿಸಲು ಜ್ವರ ಮತ್ತು ಲಾರ್ವಾ ಸಮೀಕ್ಷೆಮಾಡಿ ಪ್ರಕರಣಗಳನ್ನು ನಿಯಂತ್ರಿಸಬೇಕು. ಕುಷ್ಠರೋಗ, ಅಂಧತ್ವ, ಆಯುಷ್ಮಾನ ಭಾರತ್ – ಆರೋಗ್ಯ ಕರ್ನಾಟಕ ಯೋಜನೆ ಸಮರ್ಪಕವಾಗಿ ಬಳಸಿಕೊಂಡು ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಉತ್ತಮ ಸೇವೆ ನೀಡುವ ಮೂಲಕ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕೆಂದು ತಿಳಿಸಿದರು.
ಸಭೆಯಲ್ಲಿ ಡಿ.ಎಲ್.ಒ ಡಾ. ಮಂಜುನಾಥ್, ಆರ್.ಸಿ.ಹೆಚ್.ಒ ಡಾ. ರಾಜು, ಡಿ.ಎಂ.ಒ ಡಾ. ಶಶಿಧರ್, ಡಿ.ಟಿ.ಒ ಡಾ. ಕುಮಾರ್, ಡಿ.ಎಸ್.ಒ ಡಾ. ಕಿರಣ್ ಶಂಕರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಎಸ್. ಗಂಗಾಧರ್, ತಾಲ್ಲೂಕು ಆರೋಗ್ಯಾಧಿಕಾರಿಗಳು, ಸಾರ್ವಜನಿಕ ಆಸ್ಪತ್ರೆ ಮುಖ್ಯ ಆಡಳಿತ ವೈದ್ಯಾಧಿಕಾರಿಗಳು, ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿಗಳು, ಮೇಲ್ವಿಚಾರಕರು ಹಾಗೂ ಆರೋಗ್ಯ ಸಿಬ್ಬಂದಿ ಹಾಜರಿದ್ದರು.