ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ ಚುನಾವಣಾ ಅಖಾಡ ರಂಗೇರಿದ್ದು, ಮಂಡ್ಯದ ನಾಗಮಂಗಲದಲ್ಲಿ ಮೈತ್ರಿ ಅಭ್ಯರ್ಥಿ ಪರ ಅಧಿಕೃತ ಪ್ರಚಾರಕ್ಕೆ ಚಾಲನೆ ದೊರೆತಿದೆ.
ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿ ಪರ ಎರಡು ಪಕ್ಷದಿಂದ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ.
ನಾಗಮಂಗಲ ಪಟ್ಟಣದ ಬಡಗೂಡಮ್ಮ ದೇಗುಲದ ಆವರಣದಲ್ಲಿ ನಡೆಯುತ್ತಿರುವ ಪ್ರಚಾರ ಸಭೆಯನ್ನು ಮೈಸೂರು ಸಂಸದ ಪ್ರತಾಪ್ ಸಿಂಹ ಹಾಗೂ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಉಧ್ಘಾಟಿಸಿದ್ದಾರೆ.
ಸಭೆಯಲ್ಲಿ ಜಿಲ್ಲೆಯ ಜೆಡಿಎಸ್ ಹಾಗೂ ಬಿಜೆಪಿ ನಾಯಕರು ಭಾಗಿಯಾಗಿದ್ದಾರೆ.
ಅಪ್ಪನ ಪರ ಮಗ ನಿಖಿಲ್ ಕುಮಾರಸ್ವಾಮಿ ಪ್ರಚಾರಕ್ಕಿಳಿದಿದ್ದಾರೆ.
ಜಂಟಿಯಾಗಿ ಇಂದಿನಿಂದ ಮೈತ್ರಿ ಪಕ್ಷಗಳು ಪ್ರಚಾರ ಕಾರ್ಯಕ್ಕಿಳಿದಿದ್ದಾರೆ.