ಮಂಗಳೂರು (ದಕ್ಷಿಣ ಕನ್ನಡ): ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿರುವ ಹಿನ್ನಲೆಯಲ್ಲಿ ಮಂಗಳೂರಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ದೀಪಕ್ ರಾಜೇಶ್ ಕುವೆಲ್ಲೋ ಅವರು ಎರಡು ಉಮೇದುವಾರಿಕೆ ಸಲ್ಲಿಸಿದ್ದಾರೆ.

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ರಂಜಿನಿ ಎಂ ಅವರು ನಾಮಪತ್ರ ಸಲ್ಲಿಸಿರುತ್ತಾರೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.