Sunday, April 20, 2025
Google search engine

Homeಅಪರಾಧಬಿಎಂಟಿಸಿ ಬಸ್- ಬೈಕ್ ನಡುವೆ ಅಪಘಾತ: ಸವಾರ ಸಾವು

ಬಿಎಂಟಿಸಿ ಬಸ್- ಬೈಕ್ ನಡುವೆ ಅಪಘಾತ: ಸವಾರ ಸಾವು

ದೊಡ್ಡಬಳ್ಳಾಪುರ: ಬಿಎಂಟಿಸಿ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ನಗರದ ರೈಲ್ವೆ ಸ್ಟೇಷನ್ ಸರ್ಕಲ್ ​​ನಲ್ಲಿ ಇಂದು ಬೆಳಗ್ಗೆ ನಡೆದಿದೆ.

ಅಪಘಾತದಲ್ಲಿ ನಟರಾಜ್ (50) ಮೃತಪಟ್ಟಿದ್ದಾರೆ.

ಮೃತ ನಟರಾಜ್ ದೊಡ್ಡಬಳ್ಳಾಪುರ ತಾಲೂಕಿನ ಕೆಸ್ತೂರು ಗ್ರಾಮದವರು ಎಂದು ತಿಳಿದು ಬಂದಿದೆ. ಇಂದು ಬೆಳಗ್ಗೆ ದೊಡ್ಡಬಳ್ಳಾಪುರದಿಂದ ಬೆಂಗಳೂರಿಗೆ ಹೊರಟ್ಟಿದ್ದ ಬಸ್​​ ಹಾಗೂ ಬಾಶೆಟ್ಟಿಹಳ್ಳಿ ಕಡೆಯಿಂದ ದೊಡ್ಡಬಳ್ಳಾಪುರಕ್ಕೆ ಬರುತ್ತಿದ್ದ ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬಸ್​​​​ನ ಮುಂಭಾಗದಲ್ಲಿ ಬೈಕ್ ಸಿಲುಕಿಕೊಂಡಿತ್ತು.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರನನ್ನು ಆಸ್ಪತ್ರೆ ಸಾಗಿಲಾಗಿತ್ತು. ಆದರೆ ತಲೆಗೆ ತೀರ್ವವಾದ ಪೆಟ್ಟು ಬಿದ್ದ ಹಿನ್ನೆಲೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED ARTICLES
- Advertisment -
Google search engine

Most Popular