ಹುಬ್ಬಳ್ಳಿ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಗೆದ್ದಾಗ ಇವಿಎಂ ಸಮಸ್ಯೆ ಇರಲಿಲ್ಲ. ಆದರೆ ನಾವು ಗೆದ್ದರೆ ಮಾತ್ರ ಇವಿಎಂ ಸಮಸ್ಯೆ ಇದೆ ಅಂತ ಕಾಂಗ್ರೆಸ್‌ನವರು ಹೇಳುತ್ತಾರೆ. ಮಾತನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ, ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ವಾಗ್ದಾಳಿ ಮಾಡಿದರು.
ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಲೋಕಸಭೆ ಚುನಾವಣೆ ಸೋಲಿನ ಕನಸು ಬೀಳುತ್ತಿದೆ, ಕಾಂಗ್ರೆಸ್ಸಿನವರು ಸೋಲಿನ ಭಯದಿಂದ ಹತಾಶರಾಗಿದ್ದಾರೆ. ಮಮತಾ ಬ್ಯಾನರ್ಜಿ ಕೇವಲ ೪೦ ಕ್ಷೇತ್ರ ಗೆಲ್ಲುತ್ತೇವೆ ಅಂತ ಹೇಳುತ್ತಾರೆ. ಕಾಂಗ್ರೆಸ್ ನಾಯಕರಿಗೂ ಸೋಲುತ್ತೇವೆ ಅಂತ ಅರ್ಥ ಆಗಿದೆ. ಹೀಗಾಗಿ ಚುನಾವಣಾ ಆಯೋಗ, ಇಗಿಒ ಮೇಲೆ ಅನುಮಾನಪಡುತ್ತಾರೆ ಎಂದರು.
ಕಾಂಗ್ರೆಸ್ ಪಕ್ಷ ತನ್ನ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು. ಮೋದಿ ಅವರ ನೇತೃತ್ವದಲ್ಲಿ ಬಹಳ ಬದಲಾವಣೆಯಾಗಿದೆ. ಬಿಜೆಪಿಯನ್ನು ಗೆಲ್ಲಿಸಬೇಕೆಂದು ಜನ ತೀರ್ಮಾನ ಮಾಡಿದ್ದಾರೆ ಎಂದು ಹೇಳಿದರು.