Monday, April 21, 2025
Google search engine

Homeರಾಜ್ಯಸುದ್ದಿಜಾಲತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ನಾಮಪತ್ರ ಸಲ್ಲಿಕೆ

ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ನಾಮಪತ್ರ ಸಲ್ಲಿಕೆ

ತುಮಕೂರು: ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಇಂದು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಜಿಲ್ಲಾ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಶಾಸಕರಾದ ಜ್ಯೋತಿ ಗಣೇಶ್, ಸುರೇಶ್ ಗೌಡ, ಸುರೇಶ್ ಬಾಬು ಮತ್ತು ಮಾಜಿ ಶಾಸಕ ಸುಧಾಕರ್ ಲಾಲ್, ಬಿಜೆಪಿ ಮುಖಂಡ ಅನಿಲ್ ಕುಮಾರ್ ಜತೆಗಿದ್ದರು.

ಇದಕ್ಕೂ ಮುನ್ನ ಸೋಮಣ್ಣ ಅವರು ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ಪೂಜೆ ಸಲ್ಲಿಸಿ, ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಆ ಬಳಿಕ ವಿನೋಭಾ ನಗರದ ಅರ್ಧನಾರೀಶ್ವರ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥಿಸಿದರು.

ತ್ರಿವಿಧ ದಾಸೋಹಿ, ನಡೆದಾಡುವ ದೇವರೆಂದೇ ಖ್ಯಾತರಾಗಿದ್ದ ಸಿದ್ದಗಂಗಾ ಮಠದ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿಗಳ ೧೧೭ನೇ ಜನ್ಮದಿನಾಚರಣೆಯ ಹಿನ್ನೆಲೆಯಲ್ಲಿ ಇಂದು ಮಠಕ್ಕೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಮಂಜುನಾಥ್ ಆಗಮಿಸಿ ಗದ್ದುಗೆ ದರ್ಶನ ಪಡೆದರು. ಈ ವೇಳೆ ಬಿಜೆಪಿ ಮುಖಂಡ ರುದ್ರೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಕೂಡಾ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿದರು.

RELATED ARTICLES
- Advertisment -
Google search engine

Most Popular