ಬೆಂಗಳೂರು: ಮೈಸೂರು ಪ್ರತಿನಿಧಿ ಪತ್ರಿಕೆಯ ಸಂಪಾದಕರಾದ ಸಿ. ಕೆ. ಮಹೇಂದ್ರ ಅವರಿಗೆ ಪಿ. ಆರ್. ರಾಮಯ್ಯ ಪ್ರಶಸ್ತಿ ಹಾಗೂ ಮಲ್ಲಿಗೆ ಮಾಚಮ್ಮ ಅವರಿಗೆ ಯಶೋಧಮ್ಮ ಜಿ ನಾರಾಯಣ ಪ್ರಶಸ್ತಿಯನ್ನು ಸೋಮವಾರ ಪ್ರದಾನ ಮಾಡಲಾಯಿತು.
ಚಿತ್ರದುರ್ಗ ಜಿಲ್ಲೆಯ ಎಸ್.ಆರ್.ಎಸ್ ಕಾಲೇಜು ಆವರಣದಲ್ಲಿ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕ್ರಮದಲ್ಲಿ ಖ್ಯಾತ ಪತ್ರಕರ್ತ ಪಿ.ಸಾಯಿನಾಥ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ್ ತಗಡೂರು ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಖ್ಯಾತ ಪತ್ರಕರ್ತ ಪಿ.ಸಾಯಿನಾಥ್ ಅವರು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಚಿತ್ರದುರ್ಗ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದಿನೇಶ್ ಗೌಡಗೆರೆ, ಕೊಪ್ಪಳ ವಿಶ್ವವಿದ್ಯಾಲಯದ ಉಪಕುಲಪತಿ ಬಿ.ಕೆ.ರವಿ, ಜಿಲ್ಲಾಧಿಕಾರಿ ವೆಂಕಟೇಶ್ ಟಿ, ದರ್ಮೇದ್ರ ಕುಮಾರ್ ಮೀನಾ, ಬಿ.ಎ ಲಿಂಗಾರೆಡ್ಡಿ, ಶಿವಯೋಗಿ ಸಿ ಕಳಸದ ಉಪಸ್ಥಿತರಿದ್ದರು.