ಕೋಲಾರ : ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರು ಗಂಡು ಮಕ್ಕಳಿಗೆ ವಿಷ ಕುಡಿಸಿ ತಂದೆಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಶೀಗೆಹಳ್ಳಿ ಗ್ರಾಮದಲ್ಲಿ ನಡೆದಿದೆ.ನಾರಾಯಣಸ್ವಾಮಿ (೪೦) ಹಾಗೂ ಮಕ್ಕಳಾದ ಪವನ್ (೧೨), ನಿತಿನ್ (೧೦) ಮೃತ ದುರ್ದೈವಿಗಳು. ಕೌಟುಂಬಿಕ ಕಲಹದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.ವಿಷಯ ತಿಳಿಯುತ್ತಿದ್ದಂತೆ ಶ್ರೀನಿವಾಸಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಿದ್ದಾರೆ.