Saturday, April 19, 2025
Google search engine

Homeವಿದೇಶಸಿರಿಯಾದ ಇರಾನ್ ದೂತವಾಸ ಕಚೇರಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ: 11 ಮಂದಿ ಸಾವು

ಸಿರಿಯಾದ ಇರಾನ್ ದೂತವಾಸ ಕಚೇರಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ: 11 ಮಂದಿ ಸಾವು

ಡಮಾಸ್ಕಸ್ : ಸಿರಿಯಾದಲ್ಲಿರುವ ಇರಾನ್ ದೂತಾವಾಸ ಕಚೇರಿ ಮೇಲೆ ಇಸ್ರೇಲ್ ಸೋಮವಾರ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 11 ಜನರು ಮೃತಪಟ್ಟಿದ್ದಾರೆ.

ಈ ಕೃತ್ಯವು ಸಿರಿಯಾದಲ್ಲಿರುವ ಇರಾನ್‌ ನ ಮಿಲಿಟರಿ ಅಧಿಕಾರಿಗಳನ್ನು ಗುರಿಯಾಗಿಸುವ ಸಂಬಂಧ ಇಸ್ರೇಲ್‌ನಿಂದ ಸ್ಪಷ್ಟ ಸಂದೇಶವಾಗಿದೆ ಎನ್ನಲಾಗಿದೆ. ಇರಾನ್ ಮತ್ತು ಆ ದೇಶದ ಮಿಲಿಟರಿ ಅಧಿಕಾರಿಗಳು ಇಸ್ರೇಲ್ ವಿರುದ್ಧ ಗಾಜಾದಲ್ಲಿ ಮತ್ತು ಲೆಬನಾನ್ ಗಡಿಯಲ್ಲಿ ಹೋರಾಡುತ್ತಿರುವ ಉಗ್ರಗಾಮಿ ಗುಂಪುಗಳನ್ನು ಬೆಂಬಲಿಸುವುದಕ್ಕೆ ಇಸ್ರೇಲ್ ಆಕ್ಷೇಪ ವ್ಯಕ್ತಪಡಿಸುತ್ತಿದೆ.

ಇರಾನ್‌ ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಬ್ರಿಗೇಡಿಯರ್ ಜನರಲ್ ಮೊಹಮ್ಮದ್ ರೆಜಾ ಜಹೇದಿ ಮತ್ತು ಇನ್ನೊಬ್ಬ ಉನ್ನತ ಶ್ರೇಣಿಯ ಅಧಿಕಾರಿ ಬ್ರಿಗೇಡಿಯರ್ ಜನರಲ್ ಮೊಹಮ್ಮದ್ ಹಾದಿ ಹಾಜಿ ರಹೀಮಿ ಹಾಗೂ ಏಳು ಮಂದಿ ಸದಸ್ಯರು ಕೂಡ ಹತ್ಯೆಯಾದವರಲ್ಲಿ ಸೇರಿದ್ದಾರೆ.

ದಾಳಿಯ ಬಗ್ಗೆ ಇಸ್ರೇಲ್ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಇಸ್ರೇಲ್ ಹೇಳಿದೆ. ದಾಳಿಗೆ ಕಠಿಣ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಇರಾನ್ ಹೇಳಿದೆ. ಇದು ಇಸ್ರೇಲ್ ಮತ್ತು ಇರಾನ್‌ ನ ಮಿತ್ರರಾಷ್ಟ್ರಗಳ ನಡುವೆ ಇನ್ನೂ ಹೆಚ್ಚಿನ ಹಿಂಸಾತ್ಮಕ ದಾಳಿಗಳು ನಡೆಯುವ ಮುನ್ಸೂಚನೆ ನೀಡಿವೆ.

ಮೃತರಲ್ಲಿ ಎಂಟು ಇರಾನಿಯನ್ನರು, ಇಬ್ಬರು ಸಿರಿಯನ್ನರು ಮತ್ತು ಒಬ್ಬ ಲೆಬನೀಸ್ ಸೇರಿದ್ದಾರೆ. ಅವರೆಲ್ಲರೂ ಹೋರಾಟಗಾರರು. ನಾಗರಿಕರು ಯಾರೂ ಮೃತಪಟ್ಟಿಲ್ಲ ಎಂದು ಸಿರಿಯಾದಲ್ಲಿನ ಮೂಲಗಳು ತಿಳಿಸಿವೆ.

ಅವಶೇಷಗಳನ್ನು ತೆರವುಗೊಳಿಸಲು ಮತ್ತು ಸುಟ್ಟ ವಾಹನಗಳನ್ನು ರಸ್ತೆಯಿಂದ ಹೊರತೆಗೆಯಲು ಕಾರ್ಯಾಚರಣೆ ಪ್ರಗತಿಯಲ್ಲಿದೆ.

ದಾಳಿಯು ಸಂಪೂರ್ಣ ಕಟ್ಟಡವನ್ನು ನಾಶಪಡಿಸಿದೆ. ಒಳಗಿದ್ದ ಎಲ್ಲರೂ ಸಾವನ್ನಪ್ಪಿದ್ದಾರೆ. ಗಾಯಗೊಂಡರು ಮತ್ತು ಮೃತದೇಹಗಳನ್ನು ಹೊರತೆಗೆಯಲು, ಅವಶೇಷಗಳಡಿಯಿಂದ ಗಾಯಗೊಂಡವರನ್ನು ರಕ್ಷಿಸುವ ಕೆಲಸ ನಡೆಯುತ್ತಿದೆ ಎಂದು ಸಿರಿಯಾದ ರಕ್ಷಣಾ ಸಚಿವಾಲಯ ತಿಳಿಸಿದೆ.

ಸಿರಿಯಾದ ವಿದೇಶಾಂಗ ಸಚಿವ ಫೈಸಲ್ ಮೆಕ್ದಾದ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂತರ ಮಾತನಾಡಿ, ದಾಳಿಯನ್ನು ಖಂಡಿಸಿದರು. ಇದು ಘೋರ ಭಯೋತ್ಪಾದಕ ದಾಳಿ. ಹಲವಾರು ಮುಗ್ಧ ಜನರನ್ನು ಕೊಲ್ಲಲಾಗಿದೆ ಎಂದು ಅವರು ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular