Monday, April 21, 2025
Google search engine

Homeರಾಜ್ಯಸುದ್ದಿಜಾಲವಯನಾಡ್‌ನಿಂದ ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ

ವಯನಾಡ್‌ನಿಂದ ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ

ಕೇರಳ: ವಯನಾಡ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ನಾಮಪತ್ರ ಸಲ್ಲಿಸಿದರು.ಸಹೋದರಿ ಪ್ರಿಯಾಂಕಾ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಸೇರಿದಂತೆ ಪಕ್ಷದ ಇತರ ಹಿರಿಯ ನಾಯಕರೊಂದಿಗೆ ಆಗಮಿಸಿದ ರಾಹುಲ್ ಗಾಂಧಿ, ಚುನಾವಣಾಧಿಕಾರಿಯೂ ಆಗಿರುವ ವಯನಾಡ್ ಜಿಲ್ಲಾಧಿಕಾರಿ ಡಾ. ರೇಣು ರಾಜ್ ಅವರಿಗೆ ನಾಮಪತ್ರ ಸಲ್ಲಿಸಿದರು. ನಾಮಪತ್ರವನ್ನು ಸಲ್ಲಿಸಿದ ನಂತರ, ಸಂವಿಧಾನವನ್ನು ಎತ್ತಿಹಿಡಿಯುವ ಪ್ರಮಾಣವಚನವನ್ನು ಓದಿದರು.

ಬೆಳಗ್ಗೆ ಹೆಲಿಕಾಪ್ಟರ್ ಮೂಲಕ ವಯನಾಡಿಗೆ ಆಗಮಿಸಿದ್ದ ರಾಹುಲ್, ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ಕಲ್ಪೆಟ್ಟಾದಿಂದ ಸಿವಿಲ್ ಸ್ಟೇಷನ್‌ವರೆಗೆ ಬೃಹತ್ ರೋಡ್ ಶೋ ನಡೆಸಿದರು. ರೋಡ್‌ಶೋ ಅಂತ್ಯದ ವೇಳೆಗೆ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಅವರು, ವಯನಾಡ್‌ನಲ್ಲಿ ಅನೇಕ ಜೀವಗಳನ್ನು ಬಲಿತೆಗೆದುಕೊಂಡಿರುವ ಮಾನವ-ಪ್ರಾಣಿ ಸಂಘರ್ಷ ಸೇರಿದಂತೆ ಎಲ್ಲ ವಿಷಯಗಳಲ್ಲಿ ತಾನು ಯಾವಾಗಲೂ ವಯನಾಡಿನ ಜನರೊಂದಿಗೆ ಇರುತ್ತೇನೆ. ವಯನಾಡ್‌ನ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ರಾಷ್ಟ್ರ ಮತ್ತು ವಿಶ್ವದ ಗಮನಕ್ಕೆ ತರಲು ಸದಾ ಸಿದ್ಧ ಎಂದು ಹೇಳಿದರು.

ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಈ ಚುನಾವಣೆಯು ಪ್ರಜಾಪ್ರಭುತ್ವ ಮತ್ತು ಭಾರತದ ಸಂವಿಧಾನವನ್ನು ರಕ್ಷಿಸಲು ಇರುವ ಹೋರಾಟವಾಗಿದೆ. ಈ ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ನಾಶಮಾಡಲು ಬಯಸುವ ಶಕ್ತಿಗಳು ಒಂದೆಡೆ ಇದೆ. ಇನ್ನೊಂದೆಡೆ ದೇಶದ ಸಂವಿಧಾನ ಮತ್ತು ಪ್ರಜಾಸತ್ತಾತ್ಮಕ ಸ್ವರೂಪವನ್ನು ರಕ್ಷಿಸುವವರ ಶಕ್ತಿ ಇದೆ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular