ಮಂಡ್ಯ: ಮೋದಿ ಪ್ರಧಾನಿಯಾದ ಮೇಲೆ ದೇಶದ ಅಭಿವೃದ್ಧಿಯಾಗ್ತಿದೆ. 60 ವರ್ಷ ಈ ದೇಶ ಆಳಿದ ಕಾಂಗ್ರೆಸ್ ಸರ್ಕಾರದಿಂದ ದೇಶ ಲೂಟಿ ಆಗಿದೆ. ಈ ಬಾರಿ ಚುನಾವಣೆಯಲ್ಲಿ ಎನ್.ಡಿ.ಎ ಕೈ ಬಲಪಡಿಸಿ ಮೈತ್ರಿ ಅಭ್ಯರ್ಥಿ ಗೆಲ್ಲಿಸುವಂತೆ ಗೋವಾ ಸರ್ಕಾರ ಸಿಎಂ ಪ್ರಮೋದ್ ಸಾವಂತ್ ಕರೆ ನೀಡಿದ್ದಾರೆ.
ಮಂಡ್ಯದಲ್ಲಿ ಲೋಕಸಮರದ ಅಖಾಡ ರಂಗೇರಿದ್ದು, ಮಂಡ್ಯದ ಅಮರಾವತಿ ಹೋಟೆಲ್ ನಲ್ಲಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ ಪ್ರಧಾನಿ ಮೋದಿ ಸಾಧನೆಗಳ ಬಗ್ಗೆ ಮಾಹಿತಿ ನೀಡಿದರು.
ಮತ್ತೆ ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಬರಲು ಸಹಕರಿಸಿ ಮತ ನೀಡುವಂತೆ ಮನವಿ ಮಾಡಿದರು.
ಸುದ್ದಿಗೋಷ್ಟಿಯಲ್ಲಿ ಮಾಜಿ ಸಿ.ಎಂ ಬಿಎಸ್ ವೈ,ಮಾಜಿ ಸಚಿವರಾದ ನಾರಾಯಣಗೌಡ, ರಾಮದಾಸ್ ಮೈಸೂರು ಮೈತ್ರಿ ಅಭ್ಯರ್ಥಿ ಯದುವೀರ್,ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್ ಭಾಗಿಯಾಗಿದ್ದಾರೆ.