Saturday, April 19, 2025
Google search engine

Homeರಾಜಕೀಯಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡ ಸುಮಲತಾ ಅಂಬರೀಶ್

ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡ ಸುಮಲತಾ ಅಂಬರೀಶ್

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬೆಂಬಲ ವ್ಯಕ್ತಪಡಿಸಿದ್ದ ಸುಮಲತಾ ಅಂಬರೀಶ್ ಅವರು ಇಂದು (ಏ.05) ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಜೊತೆಗೆ ಕ್ರಿಕೆಟಿಗ ದೊಡ್ಡ ಗಣೇಶ ಮತ್ತು ಕೊಪ್ಪಳ ಮಾಜಿ ಸಂಸದ ಶಿವರಾಮಗೌಡ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರಿದರು.

ಬಿಜೆಪಿ ಸೇರ್ಪಡೆಗೂ ಮುನ್ನ ಸುಮಲತಾ ಅಂಬರೀಶ್​ ಅವರು, “ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂಬ ಆಶಯದಿಂದ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದೇನೆ. ಮಂಡ್ಯದ ನನ್ನ ಅಭಿಮಾನಿಗಳು, ನಟ ದಿ.ಅಂಬರೀಶ್ ಅಭಿಮಾನಿಗಳು ಹಿತೈಷಿಗಳ ಹಾರೈಕೆ ಮತ್ತು ಆಶೀರ್ವಾದವಿರಲಿ” ಎಂದು ಸುಮಲತಾ ಅಂಬರೀಶ್​ ಅವರು ಸಾಮಾಜಿಕ ಜಾಲತಾಣದ ಮೂಲಕ ಮನವಿ ಮಾಡಿದ್ದಾರೆ.

ಪಕ್ಷ ಸೇರ್ಪಡೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸುಮಲತಾ ಅಂಬರೀಶ್​, ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿ ನನಗೆ ಪ್ರೇರಣಾದಾಯಕವಾಗಿದೆ. ಪ್ರಧಾನಿ ಮೋದಿಯವರು ನುಡಿದಂತೆ ನಡೆಯುತ್ತಿದ್ದಾರೆ. ಅವರ ವಿಕಸಿತ ಭಾರತ ಕನಸು ನನಸಾಗಬೇಕು. ಅದಕ್ಕೆ ನಾನು ಬೆಂಬಲಿಸುವೆ. ಮುಖ್ಯವಾಗಿ ನನ್ನ ಮಂಡ್ಯ ಜಿಲ್ಲೆ ಅಭಿವೃದ್ಧಿಯಾಗಬೇಕು. ಮತ್ತು ಸಂಸತ್ತಿನಲ್ಲಿ ಹಿರಿಯ ಬಿಜೆಪಿ ನಾಯಕರು ನನಗೆ ಮಾರ್ಗದರ್ಶನ ಮಾಡಿದರು. ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರು, ತಮ್ಮ ಅವಧಿಯಲ್ಲಿ ಮಂಡ್ಯ ಜಿಲ್ಲೆಗೆ ಸಾಕಷ್ಟು ಕೊಡುಗೆ ಕೊಟ್ಟಿದ್ದಾರೆ. ಈ ಎಲ್ಲ ಕಾರಣದಿಂದ ನಾನು ಬಿಜೆಪಿ ಸೇರಿದ್ದೇನೆ ಎಂದರು.

RELATED ARTICLES
- Advertisment -
Google search engine

Most Popular