ಶಿವಮೊಗ್ಗ: ನಿಮಗೆ ಕೈ ಮುಗಿದು ಕೇಳಿಕೊಳ್ಳುತ್ತೇನೆ. ಏನೇ ನೋವಾಗಿದ್ದರೂ ಅದನ್ನು ದಯವಿಟ್ಟು ಪಕ್ಷಕ್ಕಾಗಿ ಮರೆಯಿರಿ. ಬಿಜೆಪಿ ಪಕ್ಷದ ಹಿತದೃಷ್ಟಿಯಿಂದ ನಮ್ಮೊಂದಿಗೆ ಕೈಜೋಡಿಸಿ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮನವಿ ಮಾಡಿಕೊಂಡಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿರುವ ವಿಜಯೇಂದ್ರ ಅವರು, ಎಲ್ಲವನ್ನೂ ಮರೆತು ಬಿಜೆಪಿ ಪರ ಕೆಲಸ ಮಾಡುವಂತೆ ಈಶ್ವರಪ್ಪ ಅವರಿಗೆ ಮನವಿ ಮಾಡಿಕೊಂಡಿದಾರೆ.. ಈಶ್ವರಪ್ಪ ಅವರು ಹಾವೇರಿ ಲೋಕಸಭಾ ಕ್ಷೇತ್ರದಿಂದ ತಮ್ಮ ಪುತ್ರ ಕಾಂತೇಶ್ ಅವರನ್ನು ಕಣಕ್ಕಿಳಿಸಲು ಮುಂದಾಗಿದ್ದರು. ಯಡಿಯೂರಪ್ಪ ಅವರು ಕೂಡಾ ಕಾಂತೇಶ್‌ಗೆ ಟಿಕೆಟ್ ಕೊಡಿಸುತ್ತೇನೆ ಎಂದು ಭರವಸೆ ನೀಡಿದ್ದರಂತೆ.. ಆದ್ರೆ ಬಿಜೆಪಿ ಹೈಕಮಾಂಡ್ ಕಾಂತೇಶ್‌ಗೆ ಟಿಕೆಟ್ ನೀಡಲಿಲ್ಲ. ಇದಕ್ಕೆ ಕಾರಣ ಯಡಿಯೂರಪ್ಪ ಕುಟುಂಬ ಎಂದು ಆರೋಪಿಸಿರುವ ಈಶ್ವರಪ್ಪ ಅವರು, ಶಿವಮೊಗ್ಗದಲ್ಲಿ ಬಿ.ವೈ.ರಾಘವೇಂದ್ರ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಅಖಾಡಕ್ಕಿಳಿಯುತ್ತಿದ್ದಾರೆ ಎಂದು ವಿಜಯೇಂದ್ರ ಅವರು ಹೇಳಿದರು.