Tuesday, April 22, 2025
Google search engine

Homeರಾಜ್ಯಸುದ್ದಿಜಾಲಪಿಯುಸಿ ವಿಜ್ಞಾನ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದ ಎ.ವಿದ್ಯಾಲಕ್ಷ್ಮಿ

ಪಿಯುಸಿ ವಿಜ್ಞಾನ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದ ಎ.ವಿದ್ಯಾಲಕ್ಷ್ಮಿ

ಹುಬ್ಬಳ್ಳಿ: ಪಿಯುಸಿ ವಿಜ್ಞಾನ ಪರೀಕ್ಷೆಯಲ್ಲಿ ವಾಣಿಜ್ಯ ನಗರಿ ಹುಬ್ಬಳ್ಳಿಯ ವಿದ್ಯಾರ್ಥಿನಿ ಎ.ವಿದ್ಯಾಲಕ್ಷ್ಮಿ 598 ಅಂಕಗಳನ್ನು ಪಡೆದು ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದಿದ್ದಾಳೆ.

ಮೊದಲ ರ‍್ಯಾಂಕ್ ಪಡೆದಿರುವ ಎ.ವಿದ್ಯಾಲಕ್ಷ್ಮಿ ಇಲ್ಲಿನ ಬೈರೇದೇವರಕೊಪ್ಪದ ಚೌಗುಲ ಶಿಕ್ಷಣ ಸಂಸ್ಥೆಯ ವಿದ್ಯಾನಿಕೇತನ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿನಿ.

ಪಿಯುಸಿಯಲ್ಲಿ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಜೀವಶಾಸ್ತ್ರ ವಿಷಯವನ್ನು ಆಯ್ಕೆ ಮಾಡಿಕೊಂಡಿದ್ದರು. ಇಂಗ್ಲೀಷ್ ಮಾಧ್ಯಮದಲ್ಲಿ ಪರೀಕ್ಷೆ ಬರೆದಿದ್ದರು. 600 ಅಂಕಗಳಿಗೆ 598 ಪಡೆಯುವ ಮೂಲಕ ರಾಜ್ಯಕ್ಕೆ ಮೊದಲ ರ‍್ಯಾಂಕ್ ತಮ್ಮದಾಗಿಸಿಕೊಂಡಿದ್ದಾರೆ.

ವಿದ್ಯಾಲಕ್ಷ್ಮಿ ಪ್ರಾಥಮಿಕ ಹಂತದಿಂದಲೂ ಓದಿನಲ್ಲಿ ಮುಂದೆ ಇದ್ದ ವಿದ್ಯಾರ್ಥಿನಿ. ಹತ್ತನೇ ತರಗತಿಯ ಪರೀಕ್ಷೆಯಲ್ಲಿ ಶೇಕಡಾ 97 ರಷ್ಟು ಅಂಕ ಪಡೆದಿದ್ದಳು. ತಂದೆ ಎಸ್. ಅಖಿಲೇಶ್ವರನ್  ಹಿರಿಯ ಸೆಕ್ಷನ್ ಇಂಜಿನಿಯರ್  ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮೂಲತಹ ತಮಿಳುನಾಡು ರಾಜ್ಯದವರಾದ ಇವರು 2002 ರಿಂದ ಹುಬ್ಬಳ್ಳಿಯಲ್ಲಿ ನೆಲೆಸಿದ್ದಾರೆ.

RELATED ARTICLES
- Advertisment -
Google search engine

Most Popular