Monday, April 21, 2025
Google search engine

Homeರಾಜ್ಯಸುದ್ದಿಜಾಲವಿವಿದೆಢೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಭರ್ಜರಿ ಪ್ರಚಾರ

ವಿವಿದೆಢೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಭರ್ಜರಿ ಪ್ರಚಾರ

ಸೋಮವಾರಪೇಟೆ : ತಾಲೂಕು ವ್ಯಾಪ್ತಿಯಲ್ಲಿ ಕೊಡಗು ಮೈಸೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ ಅವರಿಂದ ಭರ್ಜರಿ ಚುನಾವಣಾ ಪ್ರಚಾರ ನಡೆಸಿದರು.

ಕೊಡ್ಲಿಪೇಟೆ, ಬ್ಯಾಡಗೊಟ್ಟ, ಬೆಸ್ಸೂರು, ಹಂಡ್ಲಿ ಮತ್ತು ಶನಿವಾರಸಂತೆಯಲ್ಲಿ ಮತಯಾಚನೆ ಮಾಡಿದರು. ಕೊಡ್ಲಿಪೇಟೆಯ ಶ್ರೀ ಬಸವೇಶ್ವರ ದೇವಾಲಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ ಪೂಜೆ ಸಲ್ಲಿಸಿದರು. ಈ ಸಂದರ್ಭ ಕಿರಿಕೊಡ್ಲಿ ಮಠಾಧೀಶರಾದ ಸದಾಶಿವ ಸ್ವಾಮೀಜಿ, ಕೆಪಿಸಿಸಿ ಮುಖಂಡರಾದ ಹೆಚ್.ಎಸ್.ಚಂದ್ರಮೌಳಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಹಾಜರಿದ್ದರು.

ಹಂಡ್ಲಿ ಸರ್ಕಲ್ ನಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಎಂ.ಲಕ್ಷ್ಮಣ್ ಗೌಡ ಅವರು, ರಾಜ್ಯ ಸರಕಾರದ ಐದು ಗ್ಯಾರಂಟಿ ಯೋಜನೆಗಳೊಂದಿಗೆ ಕಾಂಗ್ರೆಸ್ ನೇತೃತ್ವದ ಸರಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಲ್ಲಿ ೨೫ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ, ಈ ಬಾರಿ ನಿಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಟ್ಟಲ್ಲಿ ತಿಂಗಳಿಗೆ ೧೫ ದಿನ ಮಡಿಕೇರಿಯಲ್ಲಿ ವಾಸ್ತವ್ಯ ಹೂಡಿ, ನಿಮ್ಮ ಸೇವಕನಾಗಿ ಕಾರ್ಯನಿರ್ವಹಿಸುದಾಗಿ ಎಂ.ಲಕ್ಷ್ಮಣ್ ಗೌಡ ಅವರು ಭರವಸೆ ನೀಡಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಪ್ರಚಾರ ಸಮಿತಿಯ ಅಧ್ಯಕ್ಷರಾದ ಟಿ ಪಿ ರಮೇಶ್, ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ ಬಿ ಸತೀಶ್ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಡಿಸಿಸಿ ಸದಸ್ಯರು, ಮುಂಚೂಣಿ ಘಟಕಗಳ ಅಧ್ಯಕ್ಷರು ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ನಾಮ ನಿರ್ದೇಶಿತ ಸದಸ್ಯರುಗಳು ವಲಯ ಅಧ್ಯಕ್ಷರು ಬೂತ್ ಅಧ್ಯಕ್ಷರುಗಳು ಹಾಗೂ ಕಾರ್ಯಕರ್ತರು ಹಾಜರಿದ್ದರು.

RELATED ARTICLES
- Advertisment -
Google search engine

Most Popular