Sunday, April 20, 2025
Google search engine

HomeUncategorizedರಾಷ್ಟ್ರೀಯಸೈನಿಕ ಶಾಲೆಗಳ ಖಾಸಗೀಕರಣ: ರಾಷ್ಟ್ರಪತಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ

ಸೈನಿಕ ಶಾಲೆಗಳ ಖಾಸಗೀಕರಣ: ರಾಷ್ಟ್ರಪತಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ

ಹೊಸದಿಲ್ಲಿ: ಸೈನಿಕ ಶಾಲೆಗಳನ್ನು ಖಾಸಗೀಕರಣ ಮಾಡುವ ಕೇಂದ್ರ ಸರ್ಕಾರದ ಕ್ರಮ ವಿರೋಧಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ.

ಜತೆಗೆ ಈ ಕುರಿತ ಎಲ್ಲಾ ಒಪ್ಪಂದಗಳನ್ನು ರದ್ದುಗೊಳಿಸ ಬೇಕೆಂದು ಒತ್ತಾಯಿಸಿದ್ದಾರೆ. ಸೈನಿಕ ಶಾಲೆಗಳನ್ನು ಖಾಸಗೀಕರಣ ಮಾಡುವ ಮೂಲಕ ಸಿದ್ಧಾಂತ ಪ್ರೇರಿತ ಶಿಕ್ಷಣ ನೀಡಲು ಉದ್ದೇಶಿಸಿದೆ.

ಕೇಂದ್ರದ ಈ ನಿರ್ಧಾರದಿಂದ ಸಾರ್ವಜನಿಕ ಮತ್ತು ಖಾಸಗಿ ಸಹಭಾ ಗಿತ್ವದಡಿ 33 ಸೈನಿಕ ಶಾಲೆಗಳ ಪೈಕಿ ಶೇ.62 ಶಾಲೆಗಳು ಬಿಜೆಪಿ-ಆರ್‌ಎಸ್‌ಎಸ್‌ ನಾಯಕರ ಕೈಸೇರಲಿವೆ ಎಂದು ಖರ್ಗೆ ಕಿಡಿಕಾರಿದ್ದಾರೆ.

RELATED ARTICLES
- Advertisment -
Google search engine

Most Popular