ಕೊಡಗು : ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಹಾರ್ಟಿಕಲ್ಚರ್ ರಿಸರ್ಚ್ (Indian Institute of Horticultural Research) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಯಂಗ್ ಪ್ರೊಫೆಶನಲ್-II ಹುದ್ದೆ ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಹಾಕಿ. ಕೊಡಗಿನಲ್ಲಿ (Kodagu) ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಅರ್ಜಿ ಹಾಕಲು ಜೂನ್ 30, 2023 ಕೊನೆಯ ದಿನವಾಗಿದೆ (Last Date). ಅರ್ಜಿದಾರರು ಆಫ್ಲೈನ್/ಪೋಸ್ಟ್ ಮೂಲಕ ಅಪ್ಲಿಕೇಶನ್ ಕಳುಹಿಸಬೇಕು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಹಾರ್ಟಿಕಲ್ಚರ್ ರಿಸರ್ಚ್ |
ಹುದ್ದೆ | ಯಂಗ್ ಪ್ರೊಫೆಶನಲ್ |
ಒಟ್ಟು ಹುದ್ದೆ | 8 |
ವಿದ್ಯಾರ್ಹತೆ | ಎಂ.ಎ್ಸಸಿ |
ವೇತನ | ತಿಂಗಳಿಗೆ 35,000 ರೂ. |
ಉದ್ಯೋಗದ ಸ್ಥಳ | ಕೊಡಗು |
ಅರ್ಜಿ ಹಾಕಲು ಕೊನೆಯ ದಿನ | ಜೂನ್ 30, 2023 |
ವಿದ್ಯಾರ್ಹತೆ:
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಹಾರ್ಟಿಕಲ್ಚರ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂ.ಎಸ್ಸಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಹಾರ್ಟಿಕಲ್ಚರ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 21 ವರ್ಷ & ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಹಾರ್ಟಿಕಲ್ಚರ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 35,000 ಸಂಬಳ ಕೊಡಲಾಗುತ್ತದೆ.
ಉದ್ಯೋಗದ ಸ್ಥಳ:
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಹಾರ್ಟಿಕಲ್ಚರ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕೊಡಗಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಮುಖ್ಯಸ್ಥರು
ICAR-ಕೇಂದ್ರೀಯ ತೋಟಗಾರಿಕಾ ಪ್ರಯೋಗ ಕೇಂದ್ರ
ಚೆಟ್ಟಳ್ಳಿ-571248
ಕೊಡಗು
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 14/06/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಜೂನ್ 30, 2023
ಸಂದರ್ಶನ ನಡೆಯುವ ದಿನ: ಜುಲೈ 12, 2023 ಬೆಳಗ್ಗೆ 10.30ಕ್ಕೆ