Sunday, April 20, 2025
Google search engine

HomeUncategorizedರಾಷ್ಟ್ರೀಯಲೋಕಸಭಾ ಚುನಾವಣೆ: ಮೂರನೇ ಹಂತದ ಚುನಾವಣೆಗೆ ಏ.12 ರಿಂದ ನಾಮಪತ್ರ ಸಲ್ಲಿಕೆ ಆರಂಭ

ಲೋಕಸಭಾ ಚುನಾವಣೆ: ಮೂರನೇ ಹಂತದ ಚುನಾವಣೆಗೆ ಏ.12 ರಿಂದ ನಾಮಪತ್ರ ಸಲ್ಲಿಕೆ ಆರಂಭ

ನವದೆಹಲಿ: ಕರ್ನಾಟಕ ಸೇರಿದಂತೆ 12 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ 94 ಲೋಕಸಭಾ ಕ್ಷೇತ್ರಗಳಿಗಾಗಿ ಮೇ 7ರಂದು ನಡೆಯಲಿರುವ ಮೂರನೇ ಹಂತದ ಚುನಾವಣೆಗೆ ಏಪ್ರಿಲ್ 12, ಶುಕ್ರವಾರದಂದು ಅಧಿಸೂಚನೆ ಹೊರಡಿಸುವುದರೊಂದಿಗೆ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

3ನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಏಪ್ರಿಲ್ 19 ಕೊನೆಯ ದಿನವಾಗಿದೆ. ಏಪ್ರಿಲ್ 20ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 22 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

ಮೂರನೇ ಹಂತದಲ್ಲಿ ಕರ್ನಾಟಕ, ಅಸ್ಸಾಂ, ಬಿಹಾರ, ಚಂಡೀಗಢ, ದಾದ್ರಾ ಮತ್ತು ನಗರ್ ಹವೇಲಿ, ದಮನ್ ಮತ್ತು ದಿಯು, ಗೋವಾ, ಗುಜರಾತ್, ಜಮ್ಮು ಮತ್ತು ಕಾಶ್ಮೀರ, ಮಹಾರಾಷ್ಟ್ರ, ಮಧ್ಯಪ್ರದೇಶ, ಉತ್ತರ ಮತ್ತು ಪಶ್ಚಿಮ ಬಂಗಾಳದಲ್ಲಿ ಚುನಾವಣೆ ನಡೆಯಲಿದೆ.

ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ತಲಾ 14 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಏಪ್ರಿಲ್ 26ರಂದು ಮೊದಲನೇ ಹಂತ ಮತ್ತು ಮೇ 7ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ.

RELATED ARTICLES
- Advertisment -
Google search engine

Most Popular