Sunday, April 20, 2025
Google search engine

Homeಅಪರಾಧ40 ವಿದ್ಯಾರ್ಥಿಗಳಿದ್ದ ಶಾಲಾ ಬಸ್​ ಪಲ್ಟಿ: ಐವರು ಮಕ್ಕಳು ಸಾವು

40 ವಿದ್ಯಾರ್ಥಿಗಳಿದ್ದ ಶಾಲಾ ಬಸ್​ ಪಲ್ಟಿ: ಐವರು ಮಕ್ಕಳು ಸಾವು

ಹರ್ಯಾಣ:  40 ವಿದ್ಯಾರ್ಥಿಗಳಿದ್ದ ಶಾಲಾ ಬಸ್​ ಪಲ್ಟಿಯಾಗಿ ಐವರು ಮಕ್ಕಳು ಸಾವನ್ನಪ್ಪಿರುವ ಘಟನೆ ಹರ್ಯಾಣ ಜಿಲ್ಲೆಯ ಕನಿನಾ ಉಪವಿಭಾಗದ ಉನ್ಹಾನಿ ಗ್ರಾಮದಲ್ಲಿ ನಡೆದಿದೆ.

ಮಹೇಂದ್ರಗಢ ಜಿಲ್ಲೆಯ ಕನಿನಾ ದಾದ್ರಿ ರಸ್ತೆಯಲ್ಲಿ ಗುರುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಶಾಲಾ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಪ್ರಾಥಮಿಕ ವರದಿಗಳ ಪ್ರಕಾರ, ಈ ಅಪಘಾತದಲ್ಲಿ ಐದು ಮಕ್ಕಳು ಸಾವನ್ನಪ್ಪಿದ್ದಾರೆ. ಇನ್ನೂ ಹತ್ತಾರು ಮಕ್ಕಳು ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಅಪಘಾತದ ವಿಡಿಯೋ ಕೂಡ ಹೊರಬಿದ್ದಿದ್ದು, ಭಯಾನಕವಾಗಿದೆ.

ಅಪಘಾತದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಮಕ್ಕಳನ್ನು ತರಾತುರಿಯಲ್ಲಿ ಆಸ್ಪತ್ರೆಗೆ ಕಳುಹಿಸಲಾಯಿತು. ಮಾಹಿತಿಯ ನಂತರ ಪೊಲೀಸ್ ಮತ್ತು ಆಡಳಿತದ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಅಪಘಾತಕ್ಕೆ ಚಾಲಕ ಓವರ್​ ಟೇಕ್​ ಮಾಡಿದ್ದೇ ಕಾರಣ ಎನ್ನಲಾಗಿದೆ.

RELATED ARTICLES
- Advertisment -
Google search engine

Most Popular