Tuesday, April 22, 2025
Google search engine

Homeರಾಜ್ಯಸಿಗ್ನಲ್ ​ಗಳಲ್ಲಿ ಮಕ್ಕಳನ್ನು ಬಳಸಿ ಭಿಕ್ಷಾಟನೆ: ಸಿಸಿಬಿ, ಮಕ್ಕಳ ಕಲ್ಯಾಣ ಸಮಿತಿ ದಾಳಿ- 47 ಮಕ್ಕಳ...

ಸಿಗ್ನಲ್ ​ಗಳಲ್ಲಿ ಮಕ್ಕಳನ್ನು ಬಳಸಿ ಭಿಕ್ಷಾಟನೆ: ಸಿಸಿಬಿ, ಮಕ್ಕಳ ಕಲ್ಯಾಣ ಸಮಿತಿ ದಾಳಿ- 47 ಮಕ್ಕಳ ರಕ್ಷಣೆ

ಬೆಂಗಳೂರು: ನಗರದ ಸಿಗ್ನಲ್ ​ಗಳಲ್ಲಿ ಮಕ್ಕಳನ್ನು ಬಳಸಿ ಭಿಕ್ಷಾಟನೆ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಹಾಗೂ ಮಕ್ಕಳ ಕಲ್ಯಾಣ ಸಮಿತಿ ಅಧಿಕಾರಿಗಳು ಜಂಟಿಯಾಗಿ ದಾಳಿ ಮಾಡಿ 47 ಮಕ್ಕಳನ್ನು ರಕ್ಷಿಸಿ 37 ಮಂದಿ ಪೋಷಕರನ್ನು ವಶಕ್ಕೆ ಪಡೆದಿದ್ದಾರೆ.

ನಗರದ ಕೆ.ಜಿ.ಹಳ್ಳಿ ಹಾಗೂ ಫ್ರೇಜರ್​ ಟೌನ್ ಸುತ್ತಮುತ್ತಲಿನ ಸಿಗ್ನಲ್​ಗಳಲ್ಲಿ ಮಕ್ಕಳನ್ನು ಬಳಸಿಕೊಂಡು ಬಿಕ್ಷಾಟನೆ ‌ನಡೆಸಲಾಗುತಿತ್ತು. ಈ ಬಗ್ಗೆ ಮಾಹಿತಿ ಆಧರಿಸಿ ದಾಳಿ ನಡೆಸಲಾಗಿದೆ. ಮಕ್ಕಳನ್ನ ಭಿಕ್ಷಾಟನೆಗೆ ಬಳಸುತ್ತಿದ್ದ 37 ಮಂದಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಕಾರ್ಯಾಚರಣೆಯಲ್ಲಿ 47 ಮಕ್ಕಳನ್ನು ರಕ್ಷಿಸಲಾಗಿದ್ದು, ಸದ್ಯ ಮಕ್ಕಳ ಕಲ್ಯಾಣ ಸಮಿತಿ ಸುಪರ್ದಿಗೆ ಒಪ್ಪಿಸಲಾಗಿದೆ. ಬಿಕ್ಷಾಟನೆಗೆ ತೊಡಗಿಸಿಕೊಂಡಿದ್ದ ಮಕ್ಕಳು ನಿಜವಾಗಲು ಪೋಷಕರ ಮಕ್ಕಳೇ ಎಂಬುದರ‌ ಬಗ್ಗೆ ಪರಿಶೀಲಿಸಲಾಗುತ್ತಿದೆ. ಮಾನವ ಕಳ್ಳಸಾಗಾಣಿಕೆ ಮೂಲಕ ಮಕ್ಕಳನ್ನು ನಗರಕ್ಕೆ ಕರೆತರಲಾಗಿದೆಯೇ ಎಂಬುದರ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular