ಬೆಂಗಳೂರು: ರಾಮ್ ಲೀಲಾ ಚಿತ್ರದ ನಿರ್ಮಾಪಕ ಸೌಂದರ್ಯ ಜಗದೀಶ್ ಇಂದು ಭಾನುವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಣಕಾಸಿನ ವಿಚಾರದಲ್ಲಿ ಸಂಬಂಧಿಸಿದ ಹಿನ್ನಲೆಯಲ್ಲಿ ನಿರ್ಮಾಪಕ ಸೂಸೈಡ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನಲ್ಲಿ ಈ ಘಟನೆ ನಡೆದಿದ್ದು, ಸದ್ಯ ಸುಗುಣ ಆಸ್ಪತ್ರೆಯಲ್ಲಿ ಅವರ ಮೃತದೇಹ ಇಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇತ್ತೀಚೆಗಷ್ಟೇ ಅದ್ಧೂರಿಯಾಗಿ ಮಗಳ ಮದುವೆ ಮಾಡಿದ್ದರು ಸೌಂದರ್ಯ ಜಗದೀಶ್. ಮಗಳ ಮದುವೆ ಸಂದರ್ಭದಲ್ಲಿ ಖುಷಿ ಖುಷಿಯಾಗಿಯೇ ಇದ್ದರು. ಇದೀಗ ಅವರ ಆತ್ಮಹತ್ಯೆಯ ಸುದ್ದಿ ಕೇಳಿ ಚಿತ್ರರಂಗದ ನಟ-ನಟಿಯರು ಸಂತಾಪ ಸೂಚಿಸಿದ್ದಾರೆ.