ಇಸ್ರೇಲ್: ಇಸ್ರೇಲ್ ಮೇಲೆ ಇರಾನ್ ಕ್ಷಿಪಣಿ ಹಾಗೂ ಡ್ರೋನ್ ದಾಳಿ ನಡೆಸಿದೆ. ಕಿಲ್ಲರ್ ಡ್ರೋನ್‌ಗಳು, ಬ್ಯಾಲಿಸ್ಟಿಕ್ ಕ್ಷಿಪಣಿಗಳು ಹಾಗೂ ಕ್ರೂಸ್ ಕ್ಷಿಪಣಿಗಳು ಸೇರಿದಂತೆ ಇರಾನ್ ೨೦೦ಕ್ಕೂ ಹೆಚ್ಚು ಬಗೆಯ ಡ್ರೋನ್ ದಾಳಿಗಳನ್ನು ನಡೆಸಿದೆ.
ಸಿರಿಯಾದ ರಾಜಧಾಮಿ ಡಮಾಸ್ಕಸ್‌ನಲ್ಲಿರುವ ತನ್ನ ರಾಯಭಾರ ಕಚೇರಿ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗೆ ಪ್ರತಿಯಾಗಿ ಇರಾನ್ ಈ ಕ್ರಮ ಕೈಗೊಂಡಿದೆ. ಇರಾನ್ ಸೇನೆಯು ಡ್ರೋನ್ ಮತ್ತು ಕ್ಷಿಪಣಿಗಳ ಮೂಲಕ ಇಸ್ರೇಲ್ ಮೇಲೆ ದಾಳಿ ಮಾಡಿದೆ.
ಇರಾನ್ ಇಸ್ರೇಲ್ ಮೇಲೆ ೧೦೦ಕ್ಕೂಹೆಚ್ಚು ಡ್ರೋನ್‌ಗಳನ್ನು ಹಾರಿಸಿದೆ. ಇರಾನ್ ದಾಳಿಯ ನಂತರ ಇಸ್ರೇಲ್ ರಕ್ಷಣಾ ಪಡೆ ತೀವ್ರ ಕಟ್ಟೆಚ್ಚರವಹಿಸಿದೆ. ಇಸ್ರೇಲಿ ವಾಯುಪ್ರದೇಶವನ್ನು ಪ್ರವೇಶಿಸುವ ಮೊದಲೇ ಡ್ರೋನ್ ಮತ್ತು ಕ್ಷಿಪಣಿದಾಳಿಗಳನ್ನು ತಡೆಹಿಡಿಯಲಾಗಿದೆ.
ಡ್ರೋನ್‌ಗಳು ಹಾಗೂ ಕ್ಷಿಪಣಿಗಳನ್ನು ಗಾಳಿಯಲ್ಲಿ ಹೊಡೆದುರುಳಿಸುವಲ್ಲಿ ಅಮೆರಿಕ ಹಾಗೂ ಬ್ರಿಟಿಷ್ ವಾಯುಪಡೆಗಳು ಇಸ್ರೇಲ್‌ಗೆ ಸಹಾಯ ಮಾಡಿವೆ. ಇಸ್ರೇಲ್ ದಕ್ಷಿಣ ಭಾಗದಲ್ಲಿರುವ ಸೇನಾ ನೆಲೆಯಲ್ಲಿ ಸಣ್ಣಪುಟ್ಟ ಹಾನಿಗಳಾಗಿವೆ. ಈ ದಾಳಿಯಿಂದ ಯಾವುದೇ ಸಾವು, ನೋವು ಸಂಭವಿಸಿಲ್ಲ.ಇಸ್ರೇಲ್‌ಗೆ ಸಹಾಯ ಮಾಡುವುದಾಗಿ ಅಮೆರಿಕ ಸ್ಪಷ್ಟಪಡಿಸಿದೆ. ಅದೇ ಸಮಯದಲ್ಲಿ ಇರಾನ್ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲಾಗುವುದು ಎಂದು ಇಸ್ರೇಲ್ ಅಧಿಕಾರಿಗಳು ಹೇಳಿದ್ದಾರೆ. ಇರಾನ್ ಇಸ್ರೇಲ್ ಮೇಲೆ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹಾರಿಸಿದೆ ಎಂದು ಇಸ್ರೇಲಿ ರಕ್ಷಣಾ ಪಡೆ ವಕ್ತಾರ ರಿಯರ್ ಅಡ್ಮಿರಲ್ ಡೇನಿಯಲ್ ಹಗರಿ ಹೇಳಿದ್ದಾರೆ.