ಮಂಗಳೂರು (ದಕ್ಷಿಣ ಕನ್ನಡ): ಕರ್ನಾಟಕ ರಾಜ್ಯಕ್ಕೆ ನೀಡಬೇಕಾದ ತೆರಿಗೆಯಲ್ಲಿ ವಂಚನೆ, ಜಿಎಸ್‌ಟಿಯಲ್ಲಿ ಮೋಸ, ಪ್ರವಾಹ ಮತ್ತು ಬರ ಪರಿಹಾರದ ಸಹಾಯ ಅನುಧಾನವನ್ನು ನೀಡದೇ ವಂಚನೆ ಮಾಡಿ ಅನ್ಯಾಯ ಮಾಡಿರುವ ಕೇಂದ್ರ ಬಿಜೆಪಿ ಸರಕಾರದ ನಿಲುವು ಖಂಡಿಸಿ ಹಾಗೂ ಪ್ರಧಾನಿ ಮೋದಿ ನಡೆಯನ್ನು ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಮಂಗಳೂರು ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅವರು ಕಳೆದ ಐದು ವರ್ಷಗಳಲ್ಲಿ ರಾಜ್ಯ ತೀವ್ರ ಬರ ಪರಿಸ್ಥಿತಿ ಸೇರಿದಂತೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ರಾಜ್ಯದ ಸಮಸ್ಯೆಗಳ ಕಡೆಗೆ ಒಮ್ಮೆಯೂ ಗಮನ ಹರಿಸದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಈಗ ರಾಜ್ಯಕ್ಕೆ ಯಾವ ಉದ್ದೇಶಕ್ಕಾಗಿ ಬರುತ್ತಿದ್ದಾರೆ ಎಂದು ಪ್ರಶ್ನಿಸಿದರು.