ಮೈಸೂರು: ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಸಾಹಿತಿ ದೇವನೂರು ಮಹದೇವ ಅವರ ನಿವಾಸಕ್ಕೆ ಭೇಟಿ ನೀಡಿ ಉಭಯಕುಶಲೋಪರಿ ವಿಚಾರಿಸಿದರಲ್ಲದೆ ಕೆಲಕಾಲ ಮಾತುಕತೆ ನಡೆಸಿದರು. ಸಚಿವರಾದ ಮೊದಲ ಬಾರಿಗೆ ಮೈಸೂರಿಗೆ ಭೇಟಿ ನೀಡಿದ ಅವರು ಉರಿಲಿಂಗಿಪೆದ್ದಿ ಮಠದ ಜ್ಞಾನಪ್ರಕಾಶ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಬಳಿಕ ದೇವನೂರು ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು. ಶಾಸಕ ಕೆ.ಹರೀಶ್‌ಗೌಡ ಸೇರಿದಂತೆ ಹಲವರು ಇದ್ದರು.