ಘಾಝಿಯಾಬಾದ್ : ಪ್ರಧಾನಿ ನರೇಂದ್ರ ಮೋದಿ ಅವರ ಇತ್ತೀಚಿನ ಸಂದರ್ಶನವನ್ನು ಫ್ಲಾಪ್ ಶೋ ಎಂದು ಕರೆದಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು, ಬಿಜೆಪಿಯು ಲೋಕಸಭೆ ಚುನಾವಣೆಯಲ್ಲಿ ೧೫೦ ಸ್ಥಾನ ಕೂಡಾ ದಾಟಲ್ಲ ಎಂದು ಹೇಳಿದ್ದಾರೆ.
ಲೋಕಸಭೆ ಚುನಾವಣೆಗೆ ಮುನ್ನ ಇಂಡಿಯಾ ಒಕ್ಕೂಟದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದು, ಮೋದಿ ಅವರ ಇತ್ತೀಚಿನ ಸಂದರ್ಶನವನ್ನು ಸ್ಕ್ರಿಪ್ಟೆಡ್ ಮತ್ತು ಫ್ಲಾಪ್ ಶೋ ಎಂದು ಕರೆದಿದ್ದಾರೆ.
ಕೆಲವು ದಿನಗಳ ಹಿಂದೆ, ಪ್ರಧಾನ ಮಂತ್ರಿ ಎಎನ್‌ಐಗೆ ಬಹಳ ದೀರ್ಘವಾದ ಸಂದರ್ಶನವನ್ನು ನೀಡಿದ್ದರು. ಅದು ಸ್ಕ್ರಿಪ್ಟ್ ಆಗಿತ್ತು, ಆದರೆ ಅದು ಫ್ಲಾಪ್ ಶೋ ಆಗಿತ್ತು. ಅದರಲ್ಲಿ ಚುನಾವಣಾ ಬಾಂಡ್‌ಗಳನ್ನು ವಿವರಿಸಲು ಪ್ರಧಾನಿ ಪ್ರಯತ್ನಿಸಿದರು. ಚುನಾವಣಾ ಬಾಂಡ್‌ಗಳ ವ್ಯವಸ್ಥೆಯು ಪಾರದರ್ಶಕತೆಗಾಗಿ, ಸ್ವಚ್ಛ ರಾಜಕಾರಣಕ್ಕೆ ಕಾರಣವಾಗಿದೆ ಎಂದು ಪ್ರಧಾನಿ ಆ ಸಂದರ್ಶನದಲ್ಲಿ ಹೇಳುತ್ತಾರೆ ಎಂದು ರಾಹುಲ್ ಗಾಂಧಿ ಹೇಳಿದರು.