Monday, April 21, 2025
Google search engine

Homeಅಪರಾಧಬೈಕ್‌ಗೆ ಜೀಪು ಡಿಕ್ಕಿ: ಸವಾರ ಸಾವು

ಬೈಕ್‌ಗೆ ಜೀಪು ಡಿಕ್ಕಿ: ಸವಾರ ಸಾವು

ಪುತ್ತೂರು: ಬೈಕ್ ಗೆ ಜೀಪು ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ, ಇಬ್ಬರು ಗಂಭೀರ ಗಾಯಗೊಂಡ ಘಟನೆ ತಡ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನರಿಮೊಗರು ಗ್ರಾಮದ ಪಾಪೆತ್ತಡ್ಕದಲ್ಲಿ ಸಂಭವಿಸಿದೆ.

ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಬಡಕ್ಕೋಡಿ ಕಡ್ಯ ನಿವಾಸಿ ಲೋಕೇಶ್(೪೮) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಅವರ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ
ಲೋಕೇಶ್ ಅವರು ಮಕ್ಕಳೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಜಾತ್ರೆಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆಯಲ್ಲಿ ಮುಂಭಾಗದಿಂದ ಆಗಮಿಸಿದ ಜೀಪು ಅವರು ಚಲಾಯಿಸುತ್ತಿದ್ದ ಬೈಕ್ ಗೆ ಡಿಕ್ಕಿಯಾಗಿತ್ತು. ಡಿಕ್ಕಿಯ ರಭಸಕ್ಕೆ ಬೈಕ್ ಎರಡು ತುಂಡಾಗಿದೆ. ಸುಮಾರು ೫೦ ಮೀಟರ್ ದೂರದ ತನಕ ಬೈಕನ್ನು ಜೀಪ್ ಎಳೆದುಕೊಂಡು ಹೋಗಿದೆ. ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟ ಲೋಕೇಶ್ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

RELATED ARTICLES
- Advertisment -
Google search engine

Most Popular