ಬೆಂಗಳೂರು: ಯಲಹಂಕ ಬಳಿ ರೈಲಿಗೆ ಸಿಲುಕಿ ಮಕ್ಕಳ ತಜ್ಞ ವೈದ್ಯ ಆತ್ಮಹತ್ಯೆಗೆ ಶರಣಾಗಿದ್ದಾರೆ. ಡಾ.ಅನಂತ್ ಪ್ರಸಾದ್(38) ಮೃತ ರ್ದುದೈವಿ. ಬೆಂಗಳೂರಿನ ನಾರ್ಥ್ ಆಸ್ಪತ್ರೆಯಲ್ಲಿ ಮಕ್ಕಳ ತಜ್ಞರಾಗಿದ್ದ ಇವರು, ಮೂರು ತಿಂಗಳ ಹಿಂದಷ್ಟೆ ಮದುವೆಯಾಗಿದ್ದರು. ಇನ್ನು ಘಟನೆ ಕುರಿತು ಯಶವಂತಪುರ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ರೈಲ್ವೆ ಪೊಲೀಸರು ಆತ್ಮಹತ್ಯೆಗೆ ನಿಖರ ಕಾರಣ ಏನು ಎನ್ನುವುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.