ವರದಿ: ಎಡತೊರೆ ಮಹೇಶ್
ಎಚ್ ಡಿ ಕೋಟೆ: ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹೆಚ್.ಡಿ . ಕೋಟೆ ವತಿಯಿಂದ ಏ.26 ರಂದು ನಡೆಯುವ ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಮತಗಟ್ಟೆಗಳಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿ ವರ್ಗದವರಿಗೆ ಔಷಧಿ ಕಿಟ್ಟುಗಳನ್ನು ವಿತರಿಸಲಾಯಿತು.
ಆರೋಗ್ಯ ಕಾಪಾಡುವ ದೃಷ್ಟಿಯಿಂದ ಮತ್ತು ತುರ್ತು ಆರೋಗ್ಯ ಸಮಸ್ಯೆಗಳನ್ನು ಪರಿಹರಿಸಲು ಅಗತ್ಯವಿರುವ ಔಷಧಿಗಳನ್ನು ಹೆಚ್.ಡಿ. ಕೋಟೆ ಮತ್ತು ಸರಗೂರು ತಾಲ್ಲೂಕಿನ 282 ಬೂತ್ ಗಳಿಗೆ ಒಟ್ಟು 300 ಔಷಧಿ ಕಿಟ್ ಗಳನ್ನೂಹೆಚ್.ಡಿ.ಕೋಟೆ ತಹಶೀಲ್ದಾರ್ ಶ್ರೀನಿವಾಸ್, ಮತ್ತು ಸರಗೂರು ತಹಶೀಲ್ದಾರ್, ಕೃಷ್ಣ ಮೂರ್ತಿರವರಿಗೆ ಈ ದಿನ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ. ಟಿ.ರವಿಕುಮಾರ್ ಮತ್ತು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾದ ಡಾ. ಸೋಮಣ್ಣ ರವರು ಹಸ್ತಾಂತರಿಸಿದರು.
ಇದೇ ಸಂದರ್ಭದಲ್ಲಿ.ಹೆಚ್.ಡಿ.ಕೋಟೆ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿಗಳಾದ ಧರಣೇಶ್, ಸರಗೂರು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳಾದ ಸುಷ್ಮಾ, AEE ಗೋವಿಂದ್ ನಾಯ್ಕ TPO ರಂಗಸ್ವಾಮಿ, ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರಾದ,ರವಿರಾಜ್ ಪ್ರತಾಪ್,ಇನ್ನಿತರರು ಉಪಸ್ಥಿತರಿದ್ದರು.