ಮೈಸೂರು: ಮೈಸೂರು ಜಿಲ್ಲಾ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಸಮಿತಿಯ ಅಧ್ಯಕ್ಷ ಅರುಣ್‌ಕುಮಾರ್ ಚಾಮುಂಡೇಶ್ವರಿ ಕ್ಷೇತ್ರದ ಇಲವಾಲದಲ್ಲಿ ಕಾರ್ಯಕರ್ತರೊಂದಿಗೆ ಮನೆಮನೆಗೆ ತೆರಳಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್‌ಗಳನ್ನು ವಿತರಿಸಿದರು.
ನಂತರ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದು ಅಧಿಕಾರಕ್ಕೆ ಬಂದ ೯ ತಿಂಗಳಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ೫ ಗ್ಯಾರಂಟಿಗಳನ್ನು ಫಲಾನುಭವಿಗಳಿಗೆ ತಲುಪಿಸಿದ್ದಾರೆ. ಬಿ.ಜೆ.ಪಿ. ಸರ್ಕಾರ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡದೇ ಸುಳ್ಳು ಹೇಳುತ್ತಾ ಜನರ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ. ಆದ್ದರಿಂದ ರಾಜ್ಯದಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಗಳಿಸಲಿದ್ದು ಈ ಬಾರಿ ಎಂ. ಲಕ್ಷ್ಮಣ್‌ರವರಿಗೆ ಹೆಚ್ಚು ಮತಗಳನ್ನು ನೀಡುವ ಮೂಲಕ ಆಯ್ಕೆ ಮಾಡಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಕೆ.ಎಸ್. ಕರೀಗೌಡ, ಪಾಷಾ, ರಾಮು, ರವಿ, ಶಿವಮ್ಮ, ಚಿಕ್ಕಚೆಲುವ, ರಟ್ನಳ್ಳಿ ಮಹಾದೇವ್ ಹಾಜರಿದ್ದರು.