Saturday, April 19, 2025
Google search engine

HomeUncategorizedರಾಷ್ಟ್ರೀಯಲೋಕಸಭೆ ಚುನಾವಣೆ: ಕೇರಳ ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಪಿಎಂ ಸುಧಾಕರನ್ ಬಿಜೆಪಿಗೆ ಸೇರ್ಪಡೆ

ಲೋಕಸಭೆ ಚುನಾವಣೆ: ಕೇರಳ ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಪಿಎಂ ಸುಧಾಕರನ್ ಬಿಜೆಪಿಗೆ ಸೇರ್ಪಡೆ


ಕೇರಳ: ಲೋಕಸಭೆ ಚುನಾವಣೆ ನಡುವೆಯೇ ವಯನಾಡಿನಲ್ಲಿ ಕಾಂಗ್ರೆಸ್ ಭಾರೀ ಹಿನ್ನಡೆ ಅನುಭವಿಸಿದೆ. ವಯನಾಡಿನಲ್ಲಿ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿಎಂ ಸುಧಾಕರನ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಪ್ರಧಾನಿ ಮೋದಿ ಹಾಗೂ ಅವರ ಅಭಿವೃದ್ಧಿ ರಾಜಕಾರಣದ ಅಭಿಮಾನಿ ಎಂಬ ಕಾರಣಕ್ಕೆ ಬಿಜೆಪಿ ಸೇರುತ್ತಿದ್ದೇನೆ ಎಂದರು. ಇತ್ತೀಚೆಗೆ, ಕೊಟ್ಟಾಯಂ ಜಿಲ್ಲೆಯ ಯುಡಿಎಫ್ ಸಂಚಾಲಕ ಎಸ್‌ಜಿ ಮಂಜಕಡಂಬಿಲ್ ಅವರು ಹೊಸ ರಾಜಕೀಯ ಪಕ್ಷವನ್ನು ರಚಿಸಿದ ನಂತರ ಎನ್‌ಡಿಎ ಸೇರಿದ್ದರು. ಕೇರಳ ಲೋಕಸಭೆ ಚುನಾವಣೆಯಲ್ಲಿ ಏಪ್ರಿಲ್ 26 ರಂದು ಮತದಾನ ನಡೆಯಲಿದೆ.

ಲೋಕಸಭೆ ಚುನಾವಣೆಯಲ್ಲಿ ವಯನಾಡಿನಿಂದ ಸ್ಪರ್ಧಿಸುತ್ತಿರುವ ಕಾಂಗ್ರೆಸ್​ ಸಂಸದ ರಾಹುಲ್ ಗಾಂಧಿ ಅವರು ಯಾರ ಕೈಗೂ ಸಿಗುವುದಿಲ್ಲ ಎಂದರು. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ-ಎಂ) ನೇತೃತ್ವದ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ (ಎಲ್‌ಡಿಎಫ್) ವಯನಾಡ್ ಕ್ಷೇತ್ರದಿಂದ ಹಿರಿಯ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ನಾಯಕಿ ಅನ್ನಿ ರಾಜಾ ಅವರನ್ನು ಕಣಕ್ಕಿಳಿಸಿದೆ.

2019 ರಲ್ಲಿ ರಾಹುಲ್ ಗಾಂಧಿ ಅವರು ವಯನಾಡು ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು. ಅಮೇಥಿಯಿಂದ ಚುನಾವಣೆಯಲ್ಲಿ ಸೋತಿದ್ದರು. ರಾಹುಲ್ ಗಾಂಧಿ ಕೂಡ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ವಯನಾಡಿನಿಂದ ಸ್ಪರ್ಧಿಸುತ್ತಿದ್ದಾರೆ.

ರಾಹುಲ್ ಗಾಂಧಿಗೆ ಈ ಸ್ಥಾನ ಸೇಫ್ ಆಗಿದ್ದು, ಈ ಬಾರಿಯೂ ಗೆಲ್ಲಬಹುದು ಎಂಬ ನಂಬಿಕೆ ಇದೆ. ನಿವೃತ್ತ ಫಾರೆಸ್ಟ್​ ರೇಂಜ್ ಆಫೀಸರ್​ ಶಶಿ ಕುಮಾರ್ ಮತ್ತು ಸಿವಿಲ್ ಎಂಜಿನಿಯರ್ ಪ್ರಜೀಶ್​ ಕೂಡ ಈ ಸಂದರ್ಭದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

RELATED ARTICLES
- Advertisment -
Google search engine

Most Popular